ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Date:

  • ಬೆಂಕಿ ಅವಘಡ ವೇಳೆ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
  • 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ

ರಾಜಧಾನಿ ಬೆಂಗಳೂರಿನಲ್ಲಿ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಆದರೆ, ಇದೇ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ಕರ್ಪೂರ ಪೂಜೆ ವೇಳೆ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.

ಗುರುವಾರ ಮಧ್ಯರಾತ್ರಿ ಕರಗ ಉತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ, ಪೂಜಾ ವಿಧಿ ವಿಧಾನಗಳು ವಿಜೃಂಭನೆಯಿಂದ ನಡೆಯುತ್ತಿವೆ. ಎನ್ ಆರ್ ಸಿಂಗ್ನಲ್‌ನಿಂದ ಧರ್ಮರಾಯ ದೇವಸ್ಥಾನದವರೆಗೂ ಕರ್ಪೂರ ಹಚ್ಚಿ ಪೂಜೆ ಸಲ್ಲಿಸಲಾಗುತ್ತಿದೆ. ಸುಮಾರು 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಏ.6ರ ಮಧ್ಯರಾತ್ರಿ ಐತಿಹಾಸಿಕ ಕರಗ ಉತ್ಸವ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ಪೂರ ಹಚ್ಚಲಿರುವ ಹಿನ್ನೆಲೆ, ಬೈಕ್‌ ಹಾಗೂ ಆಟೋ ಮಾಲೀಕರಿಗೆ ಅವುಗಳನ್ನು ತೆರವುಗೊಳಿಸುವಂತೆ ಮೈಕ್​ನಲ್ಲಿ ಹೇಳಲಾಗಿತ್ತು. ಆದರೂ ಕೂಡ ಯಾರು ತೆರವು ಮಾಡಿರಲಿಲ್ಲ. ಬೈಕ್ ನಿಲ್ಲಿಸಿದ್ದ ಸ್ಥಳ ಬಳಿ ದೊಡ್ಡ ಪ್ರಮಾಣದಲ್ಲಿ ಕರ್ಪೂರ ಹಚ್ಚಲಾಗಿತ್ತು. ಅದರಿಂದ ಹಾರಿದ ಬೆಂಕಿಯ ಕಿಡಿ ದ್ವಿಚಕ್ರ ವಾಹನಗಳಿಗೆ ತಗುಲಿದೆ. ಪರಿಣಾಮ ಬೈಕ್​ಗಳು ಹೊತ್ತಿ ಉರಿದಿವೆ.

ಕರಗ ಮಹೋತ್ಸವವು ಮಾರ್ಚ್ 29ರಿಂದ ಪ್ರಾರಂಭವಾಗಿದ್ದು, ಒಟ್ಟು 11 ದಿನಗಳ ಕಾಲ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...