ಬೆಂಗಳೂರು | ಕೈಯಲ್ಲಿ ಕತ್ತಿ ಹಿಡಿದು ಬೈಕ್‌ ವ್ಹೀಲಿಂಗ್, ಐವರು ಯುವಕರ ಬಂಧನ

Date:

ಬೆಂಗಳೂರು ನಗರದ ಕೆಲ ರಸ್ತೆಗಳಲ್ಲಿ ಕತ್ತಿ ಝಳಪಿಸುತ್ತಾ ವೀಲಿಂಗ್ ಮಾಡುತ್ತಿದ್ದ ಐದು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ ಓವರ್ ಮಾರ್ಗವಾಗಿ ಸಿನಿಮೀಯ ರೀತಿಯಲ್ಲಿ ಸಾಲು ಸಾಲಾಗಿ ಬೈಕ್‌ಗಳಲ್ಲಿ ಕೈಯಲ್ಲಿ ಕತ್ತಿ ಹಿಡಿದು, ವಾಹನ ಸವಾರರಿಗೆ ಭಯ ಬೀಳಿಸಿದ್ದಾರೆ. ಪೊಲೀಸರ ಭಯವೇ ಇಲ್ಲದೇ ಹತ್ತಾರು ಮಂದಿ ಪುಂಡರು ಲಾಂಗ್ ಹಿಡಿದುಕೊಂಡು ರಾಜಾರೋಷವಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಲಾಂಗ್ ಹಿಡಿದು ಬೈಕ್‌ಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ನಡೆಸುತ್ತಿರುವ ಪುಂಡರ ಬಂಧನಕ್ಕೆ ಬೆಂಗಳೂರು ಪೂರ್ವ ವಿಭಾಗದ ಪೊಲೀರು ಶೋಧ ನಡೆಸಿ, ಡಿಜೆ ಹಳ್ಳಿ ಮತ್ತು ರಾಮಮೂರ್ತಿ ನಗರ ಪ್ರದೇಶಗಳಲ್ಲಿ ಕತ್ತಿ ಝಳಪಿಸುತ್ತಾ ವೀಲಿಂಗ್ ಮಾಡುತ್ತಿದ್ದ ಐದು ಯುವಕರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನಯೀಮ್, ಅರಾಫತ್, ಸಾಹಿಲ್, ನಂಜಾಮತ್ ಹಾಗೂ ಅದ್ನಾನ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುಂಡರ ಈ ಗುಂಪು ಹವಾ ಮೆಂಟೇನ್ ಮಾಡುವುದಕ್ಕೆ ಭಯಬೀಳಿಸುವಂತೆ ಕೈಯಲ್ಲಿ ಕತ್ತಿ, ಲಾಂಗು, ಡ್ರ್ಯಾಗರ್ ಹಿಡಿದು ಅಟ್ಟಹಾಸ ಮೆರೆಯುತ್ತಾ, ರಸ್ತೆಯಲ್ಲಿ ಬೆಂಕಿ ಬರುವಂತೆ ಕತ್ತಿ ಹಾಗೂ ಲಾಂಗ್‌ನಿಂದ ಬೀಸುತ್ತಿದ್ದು, ಪುಂಡರ ಹಾವಳಿಗೆ ವಾಹನ ಸವಾರರು ಬೆಚ್ಚಿಬಿದ್ದಿದ್ದರು.

“ಲಾಂಗ್ ಹಿಡಿದುಕೊಂಡು ಪುಂಡರು ಬೈಕ್ ವ್ಹೀಲಿಂಗ್ ನಡೆಸಿದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಖಡಕ್ ಆಗಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಇಂತಹ ಪುಂಡರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಯಾವ ಸೆಕ್ಷನ್ ಅಡಿ ಕೇಸ್ ಹಾಕಬೇಕು ಅದನ್ನು ಪೊಲೀಸರು ಮಾಡ್ತಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ತಾರೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...