ಬೆಂಗಳೂರು | ಅನಿಲ ಸೋರಿಕೆಯಿಂದ ಗ್ಯಾಸ್ ಸಿಲಿಂಡರ್ ಸ್ಫೋಟ; ವ್ಯಕ್ತಿಗೆ ಗಾಯ

Date:

  • ರಾಥೋಡ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ
  • ರಾಥೋಡ್ ಅವರ ಮನೆಯ ಎರಡು ಗೋಡೆಗಳು ಕುಸಿದಿದೆ

ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ಪೋಟ ಸಂಭವಿಸಿದೆ. ವಿನೋದ್ ರಾಥೋಡ್(44) ಎಂಬುವವರು ಗಾಯಗೊಂಡಿದ್ದಾರೆ.  

ವಿನೋದ್ ರಾಠೋಡ್ ಅವರು ಭದ್ರಪ್ಪ ಲೇಔಟ್‌ನ 5ನೇ ಅಡ್ಡರಸ್ತೆಯ, 7ನೇ ಮುಖ್ಯರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದ ನೆಲ ಅಂತಸ್ತಿನ ನಿವಾಸಿ. ಇವರು ಮೂಲತಃ ಮಧ್ಯಪ್ರದೇಶದವರು.

“ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ವಿನೋದ್‌ ಅವರು 25 ಪ್ರತಿಶತದಷ್ಟು ಸುಟ್ಟಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿನೋದ್‌ ಬೆಳಗ್ಗೆ 7 ಗಂಟೆ ಸುಮಾರಿಗೆ ಚಹಾ ತಯಾರಿಸಲು ಗ್ಯಾಸ್ ಸ್ಟೌವ್ ಹೊತ್ತಿಸಲು ಪ್ರಯತ್ನಿಸಿದ್ದಾರೆ. ಸಿಲಿಂಡರ್‌ನಿಂದ ಅನಿಲ ಸೋರಿಕೆಯಾದ ಕಾರಣ ಅದನ್ನು ಹೊತ್ತಿಸಿದ ತಕ್ಷಣ ಸ್ಫೋಟಗೊಂಡು ಕೈ ಕಾಲುಗಳಿಗೆ ಗಾಯಗಳಾಗಿವೆ. ಗಾಳಿಯಲ್ಲಿ ಬೆಂಕಿ ಚೆಂಡು ಸಿಡಿದ ಪರಿಣಾಮ ರಾಥೋಡ್ ಅವರ ಮನೆಯ ಎರಡು ಗೋಡೆಗಳು ಕುಸಿದಿದೆ. ಕೆಲ ಗೋಡೆಗಳು ಬಿರುಕು ಬಿಟ್ಟು ವಾಲಿವೆ. ಅಡುಗೆ ಮನೆಯಲ್ಲಿದ್ದ ವಸ್ತುಗಳು ಹಾಗೂ ಪೀಠೋಪಕರಣಗಳು ಎಲ್ಲ ಚಿಲ್ಲಾಪಿಲ್ಲಿಯಾಗಿ ಬಿದ್ದಿವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 45 ರೌಡಿಶೀಟರ್‌ಗಳ ಗಡಿಪಾರಿಗೆ ಮುಂದಾದ ಪೊಲೀಸ್‌ ಇಲಾಖೆ

“ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ, ಟ್ಯಾಂಕರ್‌ನೊಂದಿಗೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ರಾಥೋಡ್ ಅವರನ್ನು ಅವಶೇಷಗಳಡಿಯಿಂದ ಹೊರತೆಗೆದು ಅವರನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಬೆಂಕಿ ಅವಘಡದ ಬಗ್ಗೆ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...