ಬೆಂಗಳೂರು | ಚಿನ್ನಕ್ಕಾಗಿ ಅಜ್ಜಿಯ ಕೊಲೆ : ಮೂವರ ಬಂಧನ

Date:

  • ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅಜ್ಜಿಯ ಕೊಲೆ
  • ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 82 ವರ್ಷದ ವಯಸ್ಸಾದ ಅಜ್ಜಿಯನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾಲಕ್ಷ್ಮಿ ಲೇಔಟ್‌ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿದ್ಧರಾಜು, ಅಶೋಕ ಸೇರಿ ಮೂವರು ಬಂಧಿತ ಆರೋಪಿಗಳು. ಕಮಲಮ್ಮ ಕೊಲೆಯಾದ ದುರ್ದೈವಿ.

ಚಿನ್ನಕ್ಕಾಗಿ ಅಜ್ಜಿಯ ಕೊಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾಲಕ್ಷ್ಮಿ ಲೇಔಟ್‌ನ ಪೋಸ್ಟ್‌ ಆಫೀಸ್‌ ಹತ್ತಿರದ ಮನೆಯಲ್ಲಿ 82 ವರ್ಷದ ಅಜ್ಜಿಯೊಬ್ಬರು ನೆಲೆಸಿದ್ದರು. ಅವರ ಹೆಸರು ಕಮಲಮ್ಮ. ಇವರ ಪತಿ ಕಳೆದ ಆರು ತಿಂಗಳ ಹಿಂದೆ ಮೃತಪಟ್ಟಿದ್ದರು. ಇವರಿಗೆ ಮೂವರು ಮಕ್ಕಳಿದ್ದು, ನಗರದಲ್ಲಿ ಬೇರೆಡೆ ನೆಲೆಸಿದ್ದರು. ಹೀಗಾಗಿ, ಮನೆಯಲ್ಲಿ ಅಜ್ಜಿ ಒಬ್ಬರೇ ಒಂಟಿಯಾಗಿ ವಾಸಿಸುತ್ತಿದ್ದರು.

ಮೇ 27ರಂದು ಸಂಜೆ ಏಳು ಗಂಟೆ ಸುಮಾರಿಗೆ ನೆರೆಮನೆಯವರು ಅಜ್ಜಿಯನ್ನು ಮಾತನಾಡಿಸಲು ಬಂದಾಗ ಬಾಗಿಲು ತೆರೆದಿರುವುದನ್ನು ಕಂಡು ಮನೆ ಒಳಗೆ ಹೋಗಿ ನೋಡಿದ್ದಾರೆ. ಈ ವೇಳೆ, ಅಜ್ಜಿಯ ಕೈ-ಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್‌ ಹಾಕಲಾಗಿತ್ತು. ಅಜ್ಜಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ನೆರೆಹೊರೆಯವರು ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು.

ಆರೋಪಿಗಳ ಹೆಡೆಮುರಿ ಕಟ್ಟಿದ್ದ ಪೊಲೀಸರು

ಅಜ್ಜಿ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದಾರೆ ಎಂಬುದನ್ನು ಅರಿತ ಆರೋಪಿಗಳು ಅಜ್ಜಿಯನ್ನು ಹತ್ಯೆಗೈದು, ಮನೆಯಲ್ಲಿರುವ ಚಿನ್ನಾಭರಣ ದೋಚಿದ್ದರು.

ಆರೋಪಿ ಸಿದ್ದರಾಜು ಪ್ಲಂಬರ್ ಕೆಲಸ ಮಾಡುತ್ತಿದ್ದನು. ಕಳೆದ ಮೂರು ತಿಂಗಳ ಹಿಂದೆ ಅಜ್ಜಿಯ ಮನೆಯಲ್ಲಿ ಪ್ಲಂಬರ್ ಕೆಲಸ ಮಾಡಿದ್ದನು. ಅಜ್ಜಿ ಮನೆಯಲ್ಲಿ ಒಬ್ಬಳೇ ಇರುವುದಾಗಿ ಹಾಗೂ ಅವರ ಬಳಿ ಸಾಕಷ್ಟು ಬಂಗಾರವಿದೆ ಎಂಬುದನ್ನು ಅರಿತ ಆತ ಈ ಬಗ್ಗೆ ತನ್ನ ಸ್ನೇಹಿತ ಅಶೋಕ್‌ಗೆ ತಿಳಿಸಿ, ಬಂಗಾರವನ್ನು ದೋಚಲು ಇಬ್ಬರು ಉಪಾಯ ಹೂಡಿದ್ದರು.

ಕೊಲೆ ನಡೆದ ದಿನ ಅಜ್ಜಿಯ ಮನೆಗೆ ಇಬ್ಬರು ಆರೋಪಿಗಳು ಎರಡು ಬಾರಿ ತೆರಳಿದ್ದಾರೆ. ಮೊದಲು ಸಂಜೆ ನಾಲ್ಕು ಗಂಟೆಗೆ ಮನೆ ಬಳಿ ತೆರಳಿ, ಖಾಲಿ ಇರುವ ಮನೆಯನ್ನೂ ಬಾಡಿಗೆ ಕೊಡಿ ಅಲ್ಲಿ ಬಿಸ್ಕಟ್‌ ಗೋಡನ್‌ ಮಾಡುತ್ತೇವೆ ಎಂದು ಕೇಳಿದ್ದಾರೆ. ಈ ವೇಳೆ, ಅಜ್ಜಿ ಬಾಡಿಗೆ ಕೊಡುವುದಿಲ್ಲ ಎಂದು ಹೇಳಿ ಬಾಗಿಲು ತೆಗೆದಿಲ್ಲ. ಬಳಿಕ ಸಂಜೆ ಆರು ಗಂಟೆಗೆ ಮತ್ತೆ ಮನೆಯ ಬಳಿ ಹೋಗಿದ್ದಾರೆ. ಈ ವೇಳೆ ಅಜ್ಜಿ ಈ ಹಿಂದೆ ಬಂದಿದ್ದವರೇ ಎಂದು ಬಾಗಿಲು ತೆಗೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಲಾಲ್‌ಬಾಗ್‌ ಬಳಿ ಸರಣಿ ಅಪಘಾತ

ಬಾಗಿಲು ತೆಗೆಯುತಿದ್ದಂತೆ ಆರೋಪಿಗಳು ಅಜ್ಜಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ಅಜ್ಜಿ ಬಳಿಯಿದ್ದ ಎರಡು ಚಿನ್ನದ ಸರ ಮತ್ತು ಎರಡು ಬಂಗಾರದ ಬಳೆ ದೋಚಿ ಪರಾರಿಯಾಗಿದ್ದರು.

ಘಟನೆ ಸಂಬಂಧ ಕೊಲೆಯಾದ ಅಜ್ಜಿಯ ಮನೆಯ ಸುತ್ತಮುತ್ತಲ ನಿವಾಸಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ತನಿಖೆಯನ್ನು ತೀವ್ರಗೊಳಿಸಿದ್ದರು. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಆರೋಪಿ ಸೆರೆಗೆ ಬಲೆ ಬಿಸಿದ್ದ ಮಹಾಲಕ್ಷ್ಮಿ ಲೇಔಟ್‌ ಪೊಲೀಸರು, ಆರೋಪಿಗಳು ಕೊಲೆ ಮಾಡಿ ಮೈಸೂರಿನಲ್ಲಿ ತಲೆಮರಿಸಿಕೊಂಡಿರುವ ಬಗ್ಗೆ ಮಾಹಿತಿ ಕಲೆಹಾಕಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...