ಬೆಂಗಳೂರು | ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಜೋಡಿ ಕೊಲೆ

Date:

  • ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು
  • ಏರೋನಿಕ್ಸ್ ಇಂಟರ್‌ನೆಟ್ ಕಂಪನಿಯ ಉದ್ಯೋಗಿಯಾಗಿದ್ದ ಆರೋಪಿ ಫೆಲಿಕ್ಸ್‌

ರಾಜ್ಯ ರಾಜಧಾನಿ ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಹಾಡಹಗಲೇ ಜೋಡಿ ಕೊಲೆಯಾಗಿದ್ದು, ಘಟನಾ ಸ್ಥಳಕ್ಕೆ ಅಮೃತಹಳ್ಳಿ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಏರೋನಿಕ್ಸ್ ಇಂಟರ್‌ನೆಟ್ ಕಂಪನಿ ಸಿಇಒ ವಿನುಕುಮಾರ್ ಮತ್ತು ಏರೋನಿಕ್ಸ್‌ ಇಂಟರ್‌ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಅವರ ಹತ್ಯೆಯಾಗಿದೆ.

ಅದೇ ಕಂಪನಿಯ ಮಾಜಿ ಉದ್ಯೋಗಿಯಾಗಿದ್ದ ಫೆಲಿಕ್ಸ್​ ಎಂಬಾತ ಎಂಡಿ ಮತ್ತು ಸಿಇಒ ಅವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಸಂಜೆ 4 ಗಂಟೆಗೆ ಕಂಪನಿ ಪ್ರವೇಶ ಮಾಡಿದ್ದ ಫೆಲಿಕ್ಸ್‌ ಎಂಡಿ ಮತ್ತು ಸಿಇಒ ಮೇಲೆ ಏಕಾಏಕಿ ದಾಳಿ ಮಾಡಿದ್ದಾನೆ. ತಲ್ವಾರ್‌ನಿಂದ ಕೊಚ್ಚಿ, ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕ್ಯೂಆರ್‌ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾದ ಪೊಲೀಸ್‌ ಇಲಾಖೆ

ಅದೇ ಕಂಪನಿಯ ಉದ್ಯೋಗಿಯಾಗಿದ್ದ ಫೆಲಿಕ್ಸ್‌ ಏರೋನಿಕ್ಸ್‌ ಇಂಟರ್‌ನೆಟ್‌ ಕಂಪನಿ ಬಿಟ್ಟು ಸ್ವಂತ ಕಂಪನಿ ಸ್ಥಾಪಿಸಿದ್ದನು. ತನ್ನ ಉದ್ಯಮಕ್ಕೆ ಎದುರಾಳಿಯಾಗಿದ್ದ ಫಣೀಂದ್ರನ ಹತ್ಯೆಗೆ ಸಂಚು ರೂಪಿಸಿದ್ದನು ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಮೃತಹಳ್ಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್‌ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...