ಬೆಂಗಳೂರು | ಇಎಂಐ ತುಂಬದಿದ್ದಕ್ಕೆ ಕಿರುಕುಳ; ವಿದ್ಯಾರ್ಥಿ ಆತ್ಮಹತ್ಯೆ

Date:

ಸಾಲದ ಇಎಂಐ ಪಾವತಿಸುವಂತೆ ಪದೇಪದೇ ಪೀಡಿಸುತ್ತಿದ್ದ ಚೀನಾ ಮೂಲದ ಆ್ಯಪ್‌ನವರ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಎಚ್‌ಎಂಟಿ ಕ್ವಾಟರ್ಸ್‌ನಲ್ಲಿ ನೆಲೆಸಿದ್ದ ವಿದ್ಯಾರ್ಥಿ ತೇಜಸ್‌ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತೇಜಸ್‌ ತನ್ನ ಸ್ನೇಹಿತ ಮಹೇಶ್‌ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ‌ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದುಕೊಂಡಿದ್ದ. ಲೋನ್‌ ಪಡೆದ ಬಳಿಕ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಹಣ ತುಂಬಿರಲಿಲ್ಲ. ಹೀಗಾಗಿ, ತೇಜಸ್‌ಗೆ ಲೋನ್‌ ನೀಡಿದವರು, ಬಾಕಿ ಉಳಿದಿರುವ ಇಎಂಐ ಕಟ್ಟಬೇಕು ಎಂದು ಪದೇಪದೇ ಪೀಡಿಸುತ್ತಿದ್ದರು ಎಂದು ತಿಳಿದುಬಂದಿದೆ.

ಲೋನ್‌ ಕೊಟ್ಟವರ ಕಿರುಕುಳದಿಂದ ಬೇಸತ್ತ ತೇಜಸ್‌ ಡೆತ್‌ನೋಟ್ ಬರೆದಿಟ್ಟು ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈ 13ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಡೆತ್‌ನೋಟ್‌ನಲ್ಲೇನಿದೆ?

ಅಪ್ಪ-ಅಮ್ಮ ನನ್ನನ್ನು ಕ್ಷಮಿಸಿ. ನಾನು ಮಾಡಿರುವ ಸಾಲ ತಿರಿಸಲಾಗುವುದಿಲ್ಲ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿ ಇಲ್ಲ. ಇದೇ ನನ್ನ ಕೊನೆ ತೀರ್ಮಾನ ‘ಥ್ಯಾಂಕ್ಸ್ ಗುಡ್​ ಬೈ’ ಎಂದು​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತದೇಹವನ್ನು ಎಂಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ತೇಜಸ್ ಪೋಷಕರು ಜಾಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...