ಬೆಂಗಳೂರು | ಬೀದಿ ವ್ಯಾಪಾರಿಗಳಿಗೆ ಮಾರ್ಷಲ್‌ಗಳ ಕಿರುಕುಳ; ಆರೋಪ

Date:

ಜಯನಗರ ನಾಲ್ಕನೇ ಬ್ಲಾಕ್‌ ಬೀದಿ ವ್ಯಾಪಾರಿಗಳಿಗೆ ಬಿಬಿಎಂಪಿ ಮಾರ್ಷಲ್‌ಗಳು ನೀಡುತ್ತಿರುವ ಕಿರುಕುಳ ತಡೆದು, ನಮ್ಮ ಜೀವನೋಪಾಯಕ್ಕೆ ರಕ್ಷಣೆ ನೀಡಬೇಕು ಎಂದು ಅಲ್ಲಿಯ ಬೀದಿ ವ್ಯಾಪಾರಿಗಳು‌ ಬೆಂಗಳೂರು ದಕ್ಷಿಣ ವಲಯ ಬಿಬಿಎಂಪಿ ಆಯುಕ್ತರಿಗೆ ಮನವಿ ಸಲ್ಲಿಸಿದರು.

“ನಮ್ಮ ಒಕ್ಕೂಟದ 27ನೇ ಕ್ರಾಸ್‌, 27ನೇ ಎ ಕ್ರಾಸ್, ಮುಖ್ಯರಸ್ತೆಯಲ್ಲಿ 65 ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದಾರೆ. ಹಾಗೆಯೇ 9ನೇ ಮುಖ್ಯರಸ್ತೆಯಲ್ಲಿ 30 ಮಂದಿ ವ್ಯಾಪಾರಿಗಳು ಹಾಗೂ 10ನೇ ಮುಖ್ಯರಸ್ತೆಯಲ್ಲಿ 12 ಮಂದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ. 2023ರ ನವೆಂಬರ್ 7ರಿಂದ ಬಿಬಿಎಂಪಿ ಮಾರ್ಷಲ್‌ಗಳೆಂದು ಹೇಳಿಕೊಂಡು ಕೆಲವರು ಬಂದು, ಅಲ್ಲಿನ ವ್ಯಾಪಾರಿಗಳ ಜೀವನೋಪಾಯದ ಹಕ್ಕಿಗೆ ಅಡ್ಡಿ ಮಾಡುತ್ತಿದ್ದಾರೆ. ಅವರು ಯಾರೆಂದು ನಮಗೆ ಗೊತ್ತಿಲ್ಲ. ಅವರ ಬಳಿ ಯಾವ ಆದೇಶವು ಇಲ್ಲ” ಎಂದು ಬೀದಿ ವ್ಯಾಪಾರಿಗಳು‌ ಆರೋಪಿಸಿದ್ದಾರೆ.

“ನಮ್ಮಲ್ಲಿ ಎಲ್ಲರ ಬಳಿ ನಾವು ವ್ಯಾಪಾರ ಮಾಡುತ್ತಿರುವ ಬಗ್ಗೆ, ಸರ್ಕಾರ ಒಂದಲ್ಲ ಒಂದು ರೀತಿಯ ಗುರುತಿನ ಚೀಟಿ ಇದೆ. ಇನ್ನೂ ಕೆಲವರ ಬಳಿ ಬಿಬಿಎಂಪಿ 2000ನೇ ಇಸವಿಯಲ್ಲಿ ನೀಡಿದ ಪರವಾನಗಿ ಪ್ರತಿ ಇದೆ. ಇನ್ನು ಕೆಲವರ ಬಳಿ ಕೇಂದ್ರ ಸರ್ಕಾರ ಡಾ ಪಿಎಂ ಸ್ವಾನಿಧಿ ಯೋಜನೆಯಡಿ ಸಾಲ ಸಿಕ್ಕಿದೆ. ಕೆಲವರು 2017ರ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟಿತ್ತು. ಆದರೆ ಬಿಬಿಎಂಪಿ ಅವರ ಗುರುತಿನ ಚೀಟಿ ಕಲೆ ಹಾಕಿದೆ. ಅವರ ಅರ್ಜಿ ಸಂಖ್ಯೆ ಇದೆ. ಕೆಲವರಿಗೆ ಮಾತ್ರ 2017ರ ಸಮೀಕ್ಷೆಯಲ್ಲಿ ಕೈ ಬಿಡಲಾಯಿತು. ಆದರೆ ಅವರೂ ಕೂಡ ಗುರುತಿನ ಚೀಟಿಗಾಗಿ ಅರ್ಜಿ ಹಾಕಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೀದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಹಾಗು ನಿಯಂತ್ರಣ ಕಾಯ್ದೆ 2014ರ ಕಲಂ 3(3) ಪುಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರನ್ನೂ ಎತ್ತಂಗಡಿ ಮಾಡುವಂತಿಲ್ಲ” ಎಂದು ತಿಳಿಸಿದ್ದಾರೆ.

“ಜಯನಗರ ನಾಲ್ಕನೇ ಕ್ರಾಸ್‌ನಲ್ಲಿ ವ್ಯಾಪಾರ ಮಾಡುತ್ತಿದ್ದ ಎಲ್ಲ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರೆಸುವಂತೆ ರಕ್ಷಣೆ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆಯಾಗದಂತೆ ಸೂಕ್ತ ಆದೇಶ ನೀಡಬೇಕು. ನಮಗೆ ಕಿರುಕುಳ ನೀಡುತ್ತಿರುವ ಮಾರ್ಷಲ್‌ಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಂಗ್ರೆಸ್‌ನವರು ಗೊಂದಲದಲ್ಲಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ

“ಬೀದಿ ವ್ಯಾಪಾರಿಗಳ(ಜೀವನೋಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ತರಬೇತಿ (ಕಾರ್ಯಾಗಾರ ) ನೀಡಬೇಕು. ಬೀದಿ ವ್ಯಾಪಾರಿಗಳ ಕಾನೂನು ಕಲಂ 3ರ ಪ್ರಕಾರ ತಕ್ಷಣ ಪಟ್ಟಣ ವ್ಯಾಪಾರ ಸಮಿತಿಯಡಿ ಸಮೀಕ್ಷೆ ನಡೆಸಬೇಕು. ಜಯನಗರ 4ನೇ ಬಡಾವಣೆ ಬೀದಿ ವ್ಯಾಪಾರಿಗಳ ಸಮಸ್ಯೆ ಪರಿಹಾರ ಮಾಡುವುದಕ್ಕಾಗಿ ಕೂಡಲೇ ಪಟ್ಟಣ ವ್ಯಾಪಾರ ಸಮಿತಿ ಸಭೆ ಕರೆಯುವಂತೆ ಆದೇಶಿಸಿ ಕೂಡಲೇ ನಮ್ಮ ಹಕ್ಕಿನ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...