ಬೆಂಗಳೂರು | ಎರಡು ಮನೆಗಳಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ; ಮೂವರ ಬಂಧನ

Date:

  • ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಪರವಾನಗಿ ಇಲ್ಲದೆ ಅಕ್ರಮವಾಗಿ ಸ್ಪೋಟಕ ವಸ್ತುಗಳ ಸಂಗ್ರಹಣೆ

ಅನುಮತಿಯಿಲ್ಲದೆ ಎರಡು ಮನೆಗಳಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಸ್ಪೋಟಕ ಸಾಮಗ್ರಿಗಳನ್ನು ಸಂಗ್ರಹಣೆ ಮಾಡಿಟ್ಟಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅನುಮತಿ ಇಲ್ಲದೆ ಮನೆಗಳಲ್ಲಿ ಆಡಗಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ವಶಕ್ಕೆ ಪಡೆದಿದ್ದಾರೆ.

ಹೆಸರಘಟ್ಟದ ರಾಘವೇಂದ್ರ ಲೇಔಟ್‌ ನಿವಾಸಿ ಶ್ರೀನಿವಾಸ (40), ಕಲ್ಲುಗುಡ್ಡದಹಳ್ಳಿ ನಿವಾಸಿ ಶಂಕರ್‌ (30) ಹಾಗೂ ಕುಮಾರ್‌ (21) ಬಂಧಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರವಾನಗಿ ಇಲ್ಲದೆ ಅಕ್ರಮವಾಗಿ ಆರೋಪಿ ಶ್ರೀನಿವಾಸ ಮನೆಯಲ್ಲಿ ಸ್ಫೋಟಕ ವಸ್ತುಗಳನ್ನು ಸಂಗ್ರಹಣೆ ಮಾಡಿಟ್ಟ ಬಗ್ಗೆ ಖಚಿತ ಮಾಹಿತಿ ಪಡೆದ ಸೋಲದೇವನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಜತೆಗೆ 16 ಕೆ.ಜಿ. ಇದ್ದಿಲು ಪುಡಿ, 10 ಕೆ.ಜಿ. ಸಲ್ಫರ್‌ ಪೌಡರ್‌, 2 ಕೆ.ಜಿ. ಸ್ಫೋಟಕ ಜೆಲ್‌, 59 ಕೆ.ಜಿ ಪೊಟ್ಯಾಶಿಯಮ್‌ ನೈಟ್ರೇಟ್‌, 1 ಕ್ವಿಂಟಲ್‌ 10 ಕೆ.ಜಿ ಇತರೆ ಸ್ಫೋಟಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಯಾಣಿಕರ ಸುರಕ್ಷತೆಗೆ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಪಿಎಸ್‌ಡಿ ಅಳವಡಿಕೆ

ಮತ್ತೊಂದು ಮನೆಯಲ್ಲಿ ಕಲ್ಲು ಕ್ವಾರಿಗಳಲ್ಲಿ ಸ್ಫೋಟಿಸಲು ಆರೋಪಿಗಳು ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿರುವುದು ತನಿಖೆಯಿಂದ ತಿಳಿದು ಬಂದಿದೆ.  

ಆರೋಪಿಗಳಾದ ಶಂಕರ್‌ ಮತ್ತು ಕುಮಾರ್‌ ಎಂಬುವರ ಮನೆಗಳ ಮೇಲೆ ದಾಳಿ ಮಾಡಿದಾಗ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

ಈ ಎರಡೂ ಪ್ರಕರಣಗಳಲ್ಲಿ ಯಾವುದೇ ಅನುಮತಿ ಪಡೆಯದೆ ಸ್ಫೋಟಕಗಳನ್ನು ಸಂಗ್ರಹಿಸಿದ್ದ ಆರೋಪದಡಿ ಆರೋಪಿಗಳ ವಿರುದ್ಧ ಸ್ಫೋಟಕ ಕಾಯ್ದೆಯಡಿ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...