ಬೆಂಗಳೂರು | ಮಂಗಳವಾರ ಸುರಿದ ಜೋರು ಮಳೆಗೆ ವಾಹನ ಸವಾರರ ಪರದಾಟ

Date:

  • ತಾಪಮಾನದಲ್ಲಿ ಕಡಿಮೆಯಾಗಿದ್ದು, ಚಳಿ ವಾತಾವರಣ
  • ಮಳೆಯಿಂದ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ

ರಾಜ್ಯದಲ್ಲಿ ಮುಂಗಾರು ಈಗ ಚುರುಕುಗೊಂಡಿದೆ. ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದ ಜೋರು ಮಳೆ ಸುರಿಯುತ್ತಿದ್ದು, ಈ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ಪ್ರಕಾಶನಗರ, ರಾಜಾಜಿನಗರ, ಯಶವಂತಪುರ, ಮಲ್ಲೇಶ್ವರಂ, ಸದಾಶಿವನಗರ, ವಿಜಯನಗರ, ಗೋವಿಂದರಾಜನಗರ, ನವರಂಗ ಸೇರಿದಂತೆ ನಗರದ ಹಲವೆಡೆ ಜೋಡು ಮಳೆ ಸುರಿಯುತ್ತಿದೆ. ಮಳೆಯಲ್ಲಿ ಸಂಚರಿಸಲು ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ.

ಕಳೆದ ಒಂದು ವಾರದಿಂದ ನಗರದಲ್ಲಿ ಮಳೆ ಜತೆ ತಂಪು ವಾತಾವರಣ ಇದ್ದು, ನಗರದ ಹಲವೆಡೆ ಸೋಮವಾರವೂ ಮಳೆ ಸುರಿದಿದೆ. ಭಾನುವಾರ ನಗರದ ವಿವಿಧೆಡೆ ಉತ್ತಮ ಮಳೆ ದಾಖಲಾಗಿದೆ. ತಾಪಮಾನದಲ್ಲಿ ಇಳಿಕೆ ಆಗಿದ್ದು, ಎಲ್ಲೆಡೆ ಚಳಿ ವಾತಾವರಣ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ನಗರದಲ್ಲಿ ಜೋರು ಮಳೆ ಸುರಿಯುತ್ತಿದ್ದು, ಸಾಯಂಕಾಲ ಕೆಲಸ ಮುಗಿಸಿ ಮನೆಗೆ ತೆರಳುವವರು ಪರದಾಡಿದರು. ವಾಹನ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಅಂಡರ್‌ಪಾಸ್‌ಗಳಲ್ಲಿ ಆಶ್ರಯ ಪಡೆದಿದ್ದರು. ಇನ್ನೂ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಕಾಮಾಕ್ಷಿಪಾಳ್ಯ ಬಸ್ ಸ್ಟಾಪ್ ಬಳಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ರಸ್ತೆಯಲ್ಲಿ ನಿಂತಿದ್ದ ಮಳೆ ನೀರನ್ನು ಹೆಡ್ ಕಾನ್ಸ್‌ಟೇಬಲ್ ಮಧುಸೂದನ್ ರವರು ತೆರುವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ‘ಶಕ್ತಿ’ ಯೋಜನೆಗೆ ತಿಂಗಳು: ಲಾಭ ಪಡೆದ 16.73 ಕೋಟಿ ಮಹಿಳೆಯರು, 402 ಕೋಟಿ ಟಿಕೆಟ್ ಮೊತ್ತ

ಇನ್ನೂ ಪಣತ್ತೂರು ರೈಲ್ವೆ ಸೇತುವೆಯ ಅಂಡರ್‌ಪಾಸ್‌ ಕೆಳಗೆ ಮಳೆ ನೀರು ನಿಂತಿದ್ದು, ಮಳೆಯಿಂದಾಗಿ ಸಂಚಾರವು ಸ್ವಲ್ಪ ನಿಧಾನವಾಗಿದೆ. ಹಾಗಾಗಿ, ಪ್ರಯಾಣಿಕರು ಈ ಮಾರ್ಗದ ಪರ್ಯಾಯವಾಗಿ ಬದಲಿ ಮಾರ್ಗದಲ್ಲಿ ಸಂಚರಿಸಲು ಬೆಂಗಳೂರು ಸಂಚಾರ ಪೊಲೀಸ್‌ ತಿಳಿಸಿದೆ.

ಬೆಳ್ಳಂದೂರಿನ ಡೌನ್ ರಾಂಪ್‌ನಲ್ಲಿ ನೀರು ತುಂಬಿರುವ ಕಾರಣ ಇಕೋಸ್ಪೇಸ್‌ನಿಂದ ಇಬ್ಬಲೂರು ಕಡೆಗೆ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದು, ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ನೀರನ್ನು ತೆರುವು ಮಾಡುತ್ತಿದ್ದಾರೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...