ಬೆಂಗಳೂರು | ಏ.6ರ ಮಧ್ಯರಾತ್ರಿ ಐತಿಹಾಸಿಕ ಕರಗ ಉತ್ಸವ

Date:

  • ಎಂಟು ಶತಮಾನಗಳಿಂದ ನಡೆಯುತ್ತಿರುವ ಐತಿಹಾಸಿಕ ಕರಗ ಉತ್ಸವ
  • 12ನೇ ಬಾರಿಗೆ ಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರ

ವಿಶ್ವವಿಖ್ಯಾತ ಹಾಗೂ ಭಾವೈಕ್ಯತೆ ಪ್ರತೀಕ ಬೆಂಗಳೂರು ಕರಗ ಉತ್ಸವ ಜತೆಗೆ ಧರ್ಮರಾಯಸ್ವಾಮಿ ಮಹಾರಥೋತ್ಸವ ಗುರುವಾರ ಮಧ್ಯರಾತ್ರಿ ನಡೆಯಲಿದೆ.

ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಕಳೆದ ಎಂಟು ಶತಮಾನಗಳಿಂದ ನಡೆಯುತ್ತಿದೆ. ಈ ವರ್ಷ ಚೈತ್ರ ಪೂರ್ಣಿಮೆ ಬೆಳದಿಂಗಳಲ್ಲಿ ಮಧ್ಯರಾತ್ರಿ 12.30ಕ್ಕೆ ಕರಗಕ್ಕೆ ಚಾಲನೆ ದೊರೆಯಲಿದೆ. ಕರಗ ವೀಕ್ಷಣೆಗೆ ಈ ಬಾರಿ 5 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದೆ.

ಹಿಂದೂ ಪಂಚಾಂಗದ ಪ್ರಕಾರ ಚೈತ್ರ ಪೌರ್ಣಮಿಯ ಗುರುವಾರ ಮಧ್ಯರಾತ್ರಿ 12.30ಕ್ಕೆ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ. ಪ್ರತಿ ಬಾರಿಯಂತೆ ಈ ಬಾರಿಯೂ 12ನೇ ಬಾರಿ ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರ್ಷದ ಕರಗದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪೊಲೀಸ್‌ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಚೈತ್ರ ಹುಣ್ಣಿಮೆಯ ಗುರುವಾರ ಮಧ್ಯರಾತ್ರಿ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ. ಇದಕ್ಕೂ ಮುನ್ನ ಗುರುವಾರ ಬೆಳಗ್ಗೆ ದ್ರೌಪದಿ ದೇವಿಗೆ ಅರಿಶಿನ ಬಣ್ಣದ ಸೀರೆ ಉಡಿಸಿ, ಬಳೆಗಳನ್ನು ತೊಡಿಸಿ ಕರಗ ಹೊತ್ತ ಅರ್ಚಕರು ಗಂಗಾಪೂಜೆ ಸಲ್ಲಿಸುತ್ತಾರೆ. ಅಲ್ಲಿಂದ ಹಸಿ ಕರಗವನ್ನು ಮಂಟಪಕ್ಕೆ ತಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ, ರಾತ್ರಿ 12.30ಕ್ಕೆ ಕರಗ ಮೆರವಣಿಗೆ ಹೊರಡುತ್ತದೆ. ಕರಗ ಮೆರವಣಿಗೆಯೂ ಸುಮಾರು 38 ಕಿ.ಮೀ ಒಳಗೊಂಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಕರಗ ಶಕ್ತ್ಯೋತ್ಸವ | ತಾತ್ಕಾಲಿಕ ಸಂಚಾರ ನಿರ್ಬಂಧ ಎಲ್ಲೆಲ್ಲಿ? ಇಲ್ಲಿದೆ ನೋಡಿ

ನಗರದ ಕುಂಬಾರಪೇಟ್ ರೋಡ್, ರಾಜ ಮಾರ್ಕೆಟ್ ಸರ್ಕಲ್-ಸಿಟಿ ಮಾರ್ಕೆಟ್ ಸರ್ಕಲ್ ಮೂಲಕ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ಮೆರವಣಿಗೆ ಹೋಗುತ್ತದೆ. ಅಲ್ಲಿಂದ, ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ, ಬಳೇಪೇಟೆ ಸರ್ಕಲ್ ಮೂಲಕ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ತೆರಳಿ, ಕಬ್ಬನ್ ಪೇಟೆ ಮುಖ್ಯ ರಸ್ತೆ ಮೂಲಕ ಶ್ರೀಧರ್ಮರಾಯ ಸ್ವಾಮಿ ದೇಗುಲಕ್ಕೆ ಮರಳುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...