ಬೆಂಗಳೂರು | ಮತದಾನದ ದಿನ ಕಾರ್ಮಿಕರಿಗೆ ಸಂಬಳ ಸಹಿತ ರಜೆ

Date:

  • ಪ್ರತಿ ಗಾರ್ಮೆಂಟ್ಸ್​​​ಗೆ ಭೇಟಿ ನೀಡಿ ಕಾರ್ಮಿಕರಿಗೆ ಮತದಾನ ಮಾಡಲು ಮನವಿ
  • ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ

ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಅಂಗ. ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯರ ಹಕ್ಕು ಮತ್ತು ಕರ್ತವ್ಯ. ಆದರೆ, ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಶೇ.50ಕ್ಕಿಂತಲೂ ಕಡಿಮೆಯಿದೆ. ಈ ಪ್ರಮಾಣವನ್ನು ಹೆಚ್ಚಿಸಲು ನಗರ ಜಿಲ್ಲಾ ಚುನಾವಣಾಧಿಕಾರಿ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದೆ. ಆ ದಿನ ಕಾರ್ಮಿಕರಿಗೆ ಸಂಬಳ ಸಹಿತ ರಜೆ ನೀಡಲಾಗಿದೆ.

ಮತದಾನದ ಪ್ರಮಾಣವನ್ನು ಹೆಚ್ಚಿಸಲು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ನಗರದಲ್ಲಿರುವ ಪ್ರತಿ ಐಟಿ ಬಿಟಿ ಹಾಗೂ ಗಾರ್ಮೆಂಟ್ಸ್​​​ಗೆ ಭೇಟಿ ನೀಡಿ ಕಾರ್ಮಿಕರಿಗೆ ಮತದಾನ ಮಾಡಲು ಮನವಿ ಮಾಡುತ್ತಿದ್ದಾರೆ.

ಮತದಾನ ಮಾಡಿದರೇ ಮಾತ್ರ ಸಂಬಳ ಸಹಿತ ರಜೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತದಾನದ ದಿನ ಮತದಾನ ಮಾಡಲು ಊರಿಗೆ ತೆರಳಿದರೇ, ಸಂಬಳ ಕಟ್‌ ಆಗುತ್ತದೆ ಎಂದು ಹಲವು ಜನ ಮತದಾನ ಮಾಡಲು ತೆರಳುವುದಿಲ್ಲ. ಮೂರು ಲಕ್ಷ ಕಾರ್ಮಿಕರು ಮತದಾನ ಮಾಡುವುದರಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ, ಚುನಾವಣೆ ದಿನ ಗಾರ್ಮೆಂಟ್ಸ್ ನೌಕರರು ಸೇರಿದಂತೆ ಕಾರ್ಮಿಕರಿಗೆಲ್ಲ ಸಂಬಳ ಸಹಿತ ರಜೆ ನೀಡಲು ನಿರ್ಧರಿಸಲಾಗಿದೆ. ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ : ಬಿಬಿಎಂಪಿ

ಬೆಂಗಳೂರಿನಲ್ಲಿ 3 ಲಕ್ಷ ಗಾರ್ಮೆಂಟ್ಸ್ ನೌಕರರಿದ್ದಾರೆ. ಕಾರ್ಖಾನೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ದುಡಿಯುತ್ತಿದ್ದಾರೆ. ನಗರದಲ್ಲಿ ಮತದಾನದ ಪ್ರಮಾಣ ಶೇ.50ಕ್ಕಿಂತಲೂ ಕಡಿಮೆ ಆಗುತ್ತಿದೆ. ಹೀಗಾಗಿ ಇದನ್ನ ತಪ್ಪಿಸಲು ವಾರದ ಮಧ್ಯೆ ಮತದಾನದ ದಿನಾಂಕ ಪ್ರಕಟಿಸಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...