ಬೆಂಗಳೂರು | ದಂಪತಿಯಿಂದ ಹನಿಟ್ರ್ಯಾಪ್‌ ದಂಧೆ ಆರೋಪ; ನಾಲ್ವರ ಬಂಧನ

Date:

ರಾಜ್ಯದಲ್ಲಿ ಇತ್ತೀಚೆಗೆ ಹನಿಟ್ರ್ಯಾಪ್‌ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ, ಪತಿ ಮತ್ತು ಪತ್ನಿ ಇಬ್ಬರು ಸೇರಿ ಹನಿಟ್ರ್ಯಾಪ್‌ ನಡೆಸುತ್ತಿದ್ದ ಜಾಲವೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತರು. ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿ.

ಅತೀವುಲ್ಲಾ ಎಂಬ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ಗೆ ಸಿಲುಕಿಸಿ ಅವರಿಂದ ಹಣ ಲಪಾಟಾಯಿಸಲು ಬಂಧಿತ ಆರೋಪಿಗಳು ಸಂಚು ರೂಪಿಸಿದ್ದರು. ಇವರ ಜೊತೆ ಈ ದಂಧೆಯಲ್ಲಿ ಓಬೆದ್ ರಕೀಮ್, ಅತೀಕ್ ಕೂಡ ಸೇರಿದ್ದರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಖಲೀಮ್ ತನ್ನ ಪತ್ನಿ ಸಭಾಳನ್ನ ವಿಧವೆ ಅಂತಾ ಅತೀವುಲ್ಲಾಗೆ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದನು. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ಕೆಲವು ಬಾರಿ ದೈಹಿಕ ಸಂಪರ್ಕ ನಡೆದಿತ್ತು.

ಕೆಲ ದಿನಗಳ ನಂತರ ಅತೀವುಲ್ಲಾನನ್ನು ಸಭಾ ‘ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ತೆಗೆದುಕೊಂಡು ಬಾ‌’ ಎಂದು ಕರೆದಿದ್ದಾಳೆ.

ಅದರಂತೆ ಡಿಸೆಂಬರ್ 14ರಂದು ಆರ್‌ಆರ್‌ ನಗರಕ್ಕೆ ಅತೀವುಲ್ಲಾ ಅವರು ಆಧಾರಕಾರ್ಡ್‌ ಜತೆಗೆ ಬಂದಿದ್ದರು. ಬಳಿಕ ಸಭಾ ಮತ್ತು ಅತೀವುಲ್ಲಾ ರೂಮ್‌ ಬುಕ್ ಮಾಡಿ ಒಳಗಡೆ ಹೋಗಿದ್ದಾರೆ. ರೂಮ್‌ಗೆ ತೆರಳಿದ ಸ್ವಲ್ಪ ಹೋತ್ತಲ್ಲೇ, ಖಲೀಮ್, ರಕೀಬ್, ಅತೀಕ್ ರೂಮ್‌ಗೆ ಬಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಎಕ್ಸ್‌’ ಖಾತೆಯಲ್ಲಿ ಇಂಧನ ಸಚಿವ ಜಾರ್ಜ್‌ ವಿರುದ್ಧ ದುರುದ್ದೇಶಪೂರಿತ ಪೋಸ್ಟ್‌ ಮಾಡಿದವನ ಬಂಧನ

ಈ ವೇಳೆ, ‘ಈ ವಿಚಾರವನ್ನು ನಿನ್ನ ಮನೆಯವರಿಗೆ ತಿಳಿಸ್ತೀವಿ. ನಿನ್ನ ಮರ್ಯಾದೆ ತೆಗೆಯುತ್ತೇವೆ” ಎಂದು ಗಲಾಟೆ ಆರಂಭಿಸಿದ್ದಾರೆ. ಈ ವಿಚಾರ ಯಾರಿಗೂ ತಿಳಿಸಬಾರದು ಎಂದರೆ ₹6 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಹಣ ಕೊಡುತ್ತೇನೆ ಎಂದ ಉದ್ಯಮಿ ಅತೀವುಲ್ಲಾ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್‌ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿದ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಇದೇ ರೀತಿ ಹಲವರಿಗೆ ಸುಲಿಗೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...