ಬೆಂಗಳೂರು | ಮೆಟ್ರೋ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳ: ಭದ್ರತೆಗಾಗಿ 326 ಹೆಚ್ಚುವರಿ ಸಿಬ್ಬಂದಿ ನಿಯೋಜನೆ

Date:

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಯತ್ನ ಹಾಗೂ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಗಟ್ಟಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ನಿರ್ಧಾರ ಮಾಡಿದೆ.

ನಮ್ಮ ಮೆಟ್ರೋದಲ್ಲಿ ಉಂಟಾಗುತ್ತಿರುವ ಅವಘಡಗಳನ್ನು ತಡೆಯಲು ಶೀಘ್ರದಲ್ಲಿಯೇ ಹೆಚ್ಚುವರಿಯಾಗಿ 326 ಸಿಬ್ಬಂದಿಯನ್ನು ಬಿಎಂಆರ್ಸಿಎಲ್ ನಿಯೋಜಿಸಲಿದೆ.

ರೈಲುಗಳು ಸಂಚರಿಸುವಾಗ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು, ಪ್ರಯಾಣಿಕರ ಚಲನವಲನದ ಮೇಲೆ ನಿಗಾ ಇಡಲು, ರೈಲುಗಳ ಆಗಮನದ ಮೊದಲು ಪ್ರಯಾಣಿಕರನ್ನು ಸರದಿ ಸಾಲಿನಲ್ಲಿ ನಿಲ್ಲಿಸುವುದು, ಹಳದಿ ಗೆರೆ ದಾಟದಂತೆ ನೋಡಿಕೊಳ್ಳುವುದು ಭದ್ರತಾ ಸಿಬ್ಬಂದಿ ಕೆಲಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವಘಡ ತಡೆಯಲು ಶೀಘ್ರದಲ್ಲೇ ಒಂಬತ್ತು ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿನಿಯೋಜನೆ ಮಾಡಲಾಗುತ್ತಿದೆ.

ನಮ್ಮ ಮೆಟ್ರೊ ಎಂಟು ಭೂಗತ ನಿಲ್ದಾಣ ಸೇರಿದಂತೆ 65 ನಿಲ್ದಾಣಗಳನ್ನು ಹೊಂದಿದೆ. ಅಲ್ಲದೆ, ಅವುಗಳಲ್ಲಿ ಯಾವುದೂ ಪ್ಲಾಟ್ಫಾರ್ಮ್ ಪರದೆಯ ಬಾಗಿಲು ಅಥವಾ ಗೇಟ್ಗಳನ್ನು ಹೊಂದಿಲ್ಲ. ಹೆಚ್ಚುವರಿ ಸಿಬ್ಬಂದಿ ನೇಮಕದ ಜತೆಗೆ ಪ್ಲಾಟ್ಫಾರಂ ಸ್ಟ್ರೀನ್ಡೋರ್ (ಪಿಎಸ್ಡಿ) ಅಳವಡಿಸಲು ಚಿಂತನೆ ನಡೆದಿದ್ದು, ಸಿಬಿಟಿಸಿ ಸಿಗ್ನಲಿಂಗ್ ಮತ್ತು ಪ್ಲಾಟ್ ಫಾರ್ಮ್ ಸ್ಟ್ರೀನ್ ಡೋರ್ಗೆ (ಪಿಎಸ್ಡಿ) ಟೆಂಡರ್ ಕರೆಯಲಾಗಿದ್ದು, ಅಲ್ಸ್ಟಾಮ್ ಟ್ರಾನ್ಸ್ ಪೋರ್ಟ್ ಇಂಡಿಯಾ ಟೆಂಡರ್ ಪಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಲ್ಡರ್ ಅಪಹರಿಸಿ ಕಿರುಕುಳ ನೀಡಿದ 8 ಜನರ ವಿರುದ್ಧ ಎಫ್ಐಆರ್ ದಾಖಲು

ಸುರಕ್ಷತೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬಿಎಂಆರ್ಸಿಎಲ್‌, ರೈಲು ನಿಲ್ದಾಣದಲ್ಲಿ ಪ್ಲಾಟ್ಫಾರಂ ಸ್ಕ್ರೀನ್ಡೋರ್‌ (ಪಿಎಸ್ಡಿ) ಅಳವಡಿಸಲು ಮುಂದಾಗಿದೆ.

ಪಿಎಸ್ಡಿ ಅಳವಡಿಕೆಗೆ ₹857 ಕೋಟಿ ಬಿಡ್ಗೆ ಟೆಂಡರ್ ಅಂತಿಮವಾಗಿದೆ. ಪಿಎಸ್ಡಿಯನ್ನೂ 13 ಅಂಡರ್ ಗ್ರೌಂಡ್ ಹಾಗೂ 37 ಎಲಿವೇಟೆಡ್ನಿಲ್ದಾಣಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...