ಬೆಂಗಳೂರು | 67 ಲಕ್ಷ ಮೌಲ್ಯದ ಚಿನ್ನ ಕಳ್ಳ ಸಾಗಾಣೆ ಮಾಡುತ್ತಿದ್ದ ಚಾಲಾಕಿ ಮಹಿಳೆಯರ ಬಂಧನ

Date:

ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಚಾಲಕಿ ಮಹಿಳೆಯರನ್ನು ಕಸ್ಟಮ್ಸ್‌ ಅಧಿಕಾರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಮುಂಜಾನೆ ಮಲೇಷ್ಯಾ, ಕುವೈತ್ ಮತ್ತು ಕ್ವಾಲಲಂಪುರದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಮೂವರು ಪ್ರಯಾಣಿಕರು ಚಿನ್ನವನ್ನು ಸಾಗಣೆ ಮಾಡಲು ಯತ್ನಿಸಿದ್ದು, ಅವರು ಬುದ್ಧಿವಂತಿಕೆ ನೋಡಿ ಕಸ್ಟಮ್ಸ್ ಅಧಿಕಾರಿಗಳು ನಿಬ್ಬೆರಗಾಗಿದ್ದಾರೆ.

ಆರೋಪಿತರಿಂದ ಒಟ್ಟು ₹67.57 ಲಕ್ಷ ಮೌಲ್ಯದ ಚಿನ್ನವನ್ನು ಒಂದೇ ದಿನದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ವಾಲಲಂಪುರದಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದ ಭಾರತೀಯ ಮೂಲದ ಮಹಿಳೆಯೊಬ್ಬರು ಕೊಟ್ಟಿದ್ದ ರವಿಕೆಯಲ್ಲಿ 300.95 ಗ್ರಾಂ ಚಿನ್ನದ ಪೇಸ್ಟ್ಅನ್ನು ಬ್ಲೌಸ್‌ನಲ್ಲಿ ಇರಿಸಿದ್ದರು. ಇದನ್ನು ನೋಡಿ ತಪಾಸಣಾ ಅಧಿಕಾರಿಗಳು ಆಶ್ಚರ್ಯಗೊಂಡರು.

ಈ ಸುದ್ದಿ ಓದಿದ್ದೀರಾ? ಇಸ್ರೋದ ಮಾನವಸಹಿತ ಗಗನಯಾನದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

ಈ ಮಹಿಳೆಯಿಂದ ವಶಕ್ಕೆ ಪಡೆದ ಚಿನ್ನದ ಮೌಲ್ಯ 17.9 ಲಕ್ಷ ರೂ. ಎಂದು ತಿಳಿದು ಬಂದಿದೆ.

ಇದೇ ವಿಮಾನದಲ್ಲಿ ಬಂದಿದ್ದ ಮಲೇಷ್ಯಾ ಮೂಲದ ಮಹಿಳೆ ಗುದದ್ವಾರದಲ್ಲಿ ನಾಲ್ಕು ಕಾಫ್ಸೂಲ್‌ಗಳಲ್ಲಿ ಒಟ್ಟು 578.27 ಗ್ರಾಂ ಚಿನ್ನವನ್ನು ಅಡಗಿಸಿಟ್ಟುಕೊಂಡು ಬಂದಿದ್ದರು. ವೈದ್ಯರ ಸಹಾಯದಿಂದ ಗುದದ್ವಾರದಲ್ಲಿದ್ದ ಚಿನ್ನವನ್ನು ಹೊರತೆಗೆದಿದ್ದು, ಅದರ ಮೌಲ್ಯ 34.4 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೈಫ್ರೂಟ್ಸ್‌ನಲ್ಲಿ ಚಿನ್ನ ಕಳ್ಳ ಸಾಗಣೆ

ಕುವೈತ್‌ನಿಂದ ಬಂದ ಭಾರತೀಯ ಮೂಲದ ಪ್ರಯಾಣಿಕನೊಬ್ಬ ಚಿನ್ನವನ್ನು ಸಣ್ಣ ಸಣ್ಣದಾಗಿ ತುಂಡು ಮಾಡಿ, ಗೋಡಂಬಿ, ಬಾದಾಮಿ, ಪಿಸ್ತಾವನ್ನು ಒಳಗೊಂಡಂತೆ ಡ್ರೈಫ್ರೂಟ್ಸ್‌ ಪೊಟ್ಟಣದಲ್ಲಿ ಸೇರಿಸಿ, ಅಧಿಕಾರಿಗಳನ್ನು ಯಾಮಾರಿಸಲು ಯತ್ನಿಸಿದ್ದ.

ತಪಸಾಣೆಯ ವೇಳೆಯಲ್ಲಿ ಡ್ರೈಫ್ರೂಟ್ಸ್‌ ಪೊಟ್ಟಣದಲ್ಲಿ ಚಿನ್ನದ ಸಣ್ಣಸಣ್ಣ 150 ಗ್ರಾಂ ತೂಕದ ತುಂಡುಗಳು ಇರುವುದು ಕಂಡುಬಂದಿದೆ. ಇದರ ಮೌಲ್ಯವೂ 15.2 ಲಕ್ಷ ರೂ. ಆಗಿದ್ದು, ಇದೇ ಆರೋಪಿಯಿಂದ 1.49 ಲಕ್ಷ ಮೌಲ್ಯದ ಐ ಫೋನ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...