ಬೆಂಗಳೂರು | ಮಾ.1ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; 200 ಸಿನಿಮಾ ಪ್ರದರ್ಶನ; ಪಾಸ್‌ಗೆ ನೋಂದಣಿ ಆರಂಭ

Date:

ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ 16ನೇ ಆವೃತ್ತಿಯು ಮಾ.1ರಿಂದ ಆರಂಭವಾಗಲಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸುಮಾರು 200 ಸಿನಿಮಾಗಳು ಪ್ರದರ್ಶನವಾಗಲಿವೆ. ಸಿನಿಮಾಸಕ್ತರು ಪಾಸ್‌ ಪಡೆಯಲು ನೋಂದಣಿ ಮಾಡಿಕೊಳ್ಳಬಹುದು. ಫೆಬ್ರವರಿ 12ರಿಂದ ನೋಂದಣಿ ಆರಂಭವಾಗಿದೆ ಎಂದು ಚಿತ್ರೋತ್ಸವ ಸಮಿತಿ ಅಧ್ಯಕ್ಷೆ ಬಿ.ಬಿ.ಕಾವೇರಿ ತಿಳಿಸಿದ್ದಾರೆ.

ಚಲನಚಿತ್ರೋತ್ಸವದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “‘ಬೆಂಗಳೂರಿನಲ್ಲಿ ಜಗತ್ತು’ ಎಂಬ ಶೀರ್ಷಿಕೆಯಡಿ ಚಿತ್ಸೋತ್ಸವ ನಡೆಯಲಿದೆ. ರಾಜಾಜಿನಗರದ ಓರಾಯನ್ ಮಾಲ್‍ನ 11 ಸ್ಕ್ರೀನ್‍ಗಳಲ್ಲಿ ಸಾರ್ವಜನಿಕರಿಗೆ ಸಿನಿಮಾಗಳ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಚಿತ್ರೋತ್ಸವವು 7 ದಿನಗಳ ಕಾಲ ನಡೆಯಲಿದೆ. ಸಿನಿಮಾ ಆಸಕ್ತರು ಪಾಸ್‌ ಪಡೆದುಕೊಂಡು ಚಲನಚಿತ್ರೋತ್ಸವದಲ್ಲಿ ಭಾಗಿಯಾಗಬಹುದು. ಪಾಸ್‌ಗೆ ಸಾರ್ವಜನಿಕರಿಗೆ 800 ರೂ. ಹಾಗೂ ವಿದ್ಯಾರ್ಥಿ, ಹಿರಿಯ ನಾಗರಿಕರು, ಚಿತ್ರೋದ್ಯಮದ ಸದಸ್ಯರಿಗೆ 400 ರೂ. ಶುಲ್ಕವಿರಲಿದೆ. ಚಿತ್ರೋತ್ಸವದ ಜಾಲತಾಣದ ಮೂಲಕ ನೋಂದಾಯಿಸಿಕೊಳ್ಳಬಹುದು” ಎಂದು ತಿಳಿಸಿದ್ದಾರೆ.

WhatsApp Image 2025 02 12 at 5.42.53 PM

“ಚಿತ್ರೋತ್ಸವದಲ್ಲಿ ಏಷಿಯನ್, ಇಂಡಿಯನ್ ಹಾಗೂ ಕನ್ನಡ ಚಲನಚಿತ್ರಗಳ ಸ್ಫರ್ಧಾ ವಿಭಾಗಗಳಿದ್ದು, ಮೂರು ವಿಭಾಗಗಳಲ್ಲಿ ತಲಾ ಮೂರು ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿತ್ರೋತ್ಸವದಲ್ಲಿ ಎಐ ಕುರಿತ ವಿಶೇಷ ಕಾರ್ಯಾಗಾರ ಮಾ.3ರಂದು ನಡೆಯಲಿದೆ. ಹಿಂದೆ ಇದ್ದ ಟೆಂಟ್ ಸಿನಿಮಾ ರೀತಿಯಲ್ಲಿ ಕೆಲ ಸಿನಿಮಾಗಳ ಪ್ರದರ್ಶನ ನಡೆಯಲಿದೆ” ಎಂದು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...