ಬೆಂಗಳೂರು | ತಲೆಗೆ ಕಬ್ಬಿಣದ ರಾಡ್‌ ಹೊಕ್ಕಿ ಕಾರ್ಮಿಕ ದುರಂತ ಸಾವು

Date:

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕನ ತಲೆಗೆ ಕಬ್ಬಿಣದ ರಾಡ್ ಹೊಕ್ಕಿದ್ದು, ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಮೃತ ಕಾರ್ಮಿಕನನ್ನು ತ್ರಿಪುರಾ ರಾಜ್ಯದ ಅಗರ್ತಲಾ ಮೂಲದ ದೀಪಾಂಕರ್ ಚಾಸ ಎಂದು ಹೇಳಲಾಗಿದೆ.

ಆನೇಕಲ್ ತಾಲೂಕಿನ ಕೆ.ಜಿ.ವೀರಸಂದ್ರದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆರು ತಿಂಗಳಿಂದ ದೀಪಾಂಕರ್‌ ಕೂಡ ಅಲ್ಲಿಯೇ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

100 ಅಡಿ ಎತ್ತರದಿಂದ ಕಬ್ಬಿಣದ ರಾಡ್‌ ಕಾರ್ಮಿಕನ ಮೇಲೆ ಬಿದ್ದಿದ್ದು, ತಲೆಗೆ ಹೊಕ್ಕಿದೆ. ತೀವ್ರ ರಕ್ತಸ್ರಾವವಾಗಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ದೀಪಾಂಕರ್ ಇತ್ತೀಚೆಗಷ್ಟೇ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ದುರದೃಷ್ಟವಶಾತ್ ದಾರುಣ ಅಂತ್ಯ ಕಂಡಿದ್ದಾರೆ. ಕಾಮಗಾರಿ ವೇಳೆ ಕಾರ್ಮಿಕರು ಯಾವುದೇ ರಕ್ಷಣಾ ಉಪಕರಣಗಳನ್ನೂ ಬಳಸುತ್ತಿರಲಿಲ್ಲ ಎಂದು ಹೇಳಲಾಗಿಲಾಗಿದೆ.

ದುರಂತ ಘಟನೆ ಸಂಬಂಧ ಮೃತನ ಚಿಕ್ಕಪ್ಪ ಅಭಿಮನ್ಯು ಕೈರಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಮೇಸ್ತ್ರಿ ಮೊಹಮ್ಮದ್ ಅತ್ತಾವುಲ್ಲಾ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 304 ಎ ಅಡಿಯಲ್ಲಿ ಪ್ರಕರಣ ದಾಖಲಿಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...