ಬೆಂಗಳೂರು | ಜ್ಯುವೆಲರಿ ಶಾಪ್ ಮಾಲೀಕರ ಮನೆಯಲ್ಲಿ ಆಭರಣ ಮತ್ತು ಲಕ್ಷಾಂತರ ರೂ. ಕದ್ದ ಕೆಲಸಗಾರ

Date:

ಜ್ಯುವೆಲರಿ ಶಾಪ್ ಮಾಲೀಕ ಮನೆಯಲ್ಲಿ ಇರದ ಸಮಯವನ್ನು ನೋಡಿಕೊಂಡ ಮನೆ ಕೆಲಸಗಾರ ಬರೋಬ್ಬರಿ 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.29 ರಂದು ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೇತರಾಮ್‌ ಮತ್ತು ರಾಕೇಶ್ ಬಂಧಿತ ಆರೋಪಿಗಳು. ಈತನು ಮೂಲತಃ ರಾಜಸ್ಥಾನದವನು ಎಂದು ತಿಳಿದುಬಂದಿದೆ.

ಬೆಂಗಳೂರಿನ ನಗ್ರತ್ ಪೇಟೆಯಲ್ಲಿನ ಕಂಚನ್‌ ಚಿನ್ನಾಭರಣಗಳ ಮಾಲೀಕ ಅರವಿಂದ್ ಕುಮಾರ್ ಥಾಡೆ ಅವರ ಮನೆಗೆ ಆರೋಪಿ ಕೇತರಾಮ್ ಕಳೆದ ಎರಡು ತಿಂಗಳ ಹಿಂದೆ ಅವರ ಮನೆಗೆ ಕೆಲಸಕ್ಕೆ ಸೇರಿದ್ದನು. ಅವರ ಮನೆಯ ಕೆಲಸ ಮಾಡಿಕೊಂಡು ಇದ್ದನು. ಈತನು ಮಾಲೀಕನೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದನು. ಮಾಲೀಕನ ಜತೆಗೆ ಇದ್ದ ಈತ, ಅವರ ಆರ್ಥಿಕ ವ್ಯವಹಾರಗಳ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರವಿಂದ್ ಕುಮಾರ್ ಥಾಡೆ ಅವರು ತಮ್ಮ ಕುಟುಂಬದೊಂದಿಗೆ ದೀಪಾವಳಿ ಹಬ್ಬಕ್ಕೆ ಮುಂಬೈಗೆ ತೆರಳಿದ್ದಾರೆ. ಅವರು ತೆರಳುವ ವೇಳೆ, ಅವರ ಬ್ಯಾಗ್‌ನಲ್ಲಿಟ್ಟಿದ ಜ್ಯವೆಲ್ಲರಿ ಶಾಪ್ ಕೀಯನ್ನು ಅವರಿಗೆ ಗೊತ್ತಾಗದ ಹಾಗೇ ತೆಗೆದುಕೊಂಡಿದ್ದಾನೆ. ಇತ್ತ ಥಾಡೆ ಅವರ ಕುಟುಂಬ ಮುಂಬೈಗೆ ತೆರಳಿದ ನಂತರ, ರಾಜಸ್ಥಾನ ಮೂಲದ ಅವನದೇ ಊರಿನ ರಾಕೇಶ್ ಹೆಸರಿನ ತನ್ನ ಸ್ನೇಹಿತನನ್ನು ಕರೆಸಿಕೊಂಡಿದ್ದಾನೆ. ಅಕ್ಟೋಬರ್ 29ರಂದು ಅರವಿಂದ್ ಅವರ ಅಂಗಡಿ ಕೀ ತೆಗೆದು ಒಳಗೆ ನುಗ್ಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಫ್‌ಐಆರ್‌ ದಾಖಲು

ಜ್ಯುವೆಲ್ಲರಿ ಶಾಪ್‌ನಲ್ಲಿದ್ದ ಬರೋಬ್ಬರಿ 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ ಮಾಡಿ, ಪರಾರಿಯಾಗಿದ್ದಾರೆ.

ಥಾಡೆ ಅವರ ಪುತ್ರನಿಗೆ ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಗೆ ಥಾಡೆ ಅವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಕೇತುರಾಮ್ ಮತ್ತು ರಾಕೇಶ್ ನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...