ಬೆಂಗಳೂರು | ಯುಪಿಎಸ್‌ ಬ್ಯಾಟರಿ ಕಳವು ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

Date:

  • 8 ಲಕ್ಷ ಮೌಲ್ಯದ 52 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡ ಪೊಲೀಸರು
  • ಜೆಪಿ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾಟರಿ ಕದಿಯುತ್ತಿದ್ದ ಆರೋಪಿಗಳು

ರಾಜಧಾನಿ ಬೆಂಗಳೂರಿನಲ್ಲಿ ಯುಪಿಎಸ್‌ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ ಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 8 ಲಕ್ಷ ಮೌಲ್ಯದ 52 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಮೊಹಮ್ಮದ್ ಅರ್ಷದ್(25), ಸೈಯದ್ ಯಾರ್ಬ್(23) ಹಾಗೂ ಸಿದ್ದಿಕ್(20) ಬಂಧಿತರು. ಇವರು ಲಕ್ಷ್ಮಣ ರಾವ್ ನಗರದ ನಿವಾಸಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಜೆಪಿ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾಟರಿಗಳನ್ನು ಕದಿಯುತ್ತಿದ್ದರು. ಇದುವರೆಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಇಂತಹ ಸಣ್ಣ ಕಳ್ಳತನವಾದಾಗ ಜನರು ಸಾಮಾನ್ಯವಾಗಿ ದೂರು ದಾಖಲಿಸಲು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಕಳೆದ ವಾರ ಜೆ.ಪಿ.ನಗರ ಜಲಮಂಡಳಿ ಸೇವಾ ಠಾಣೆಯಲ್ಲಿ ಒಂದೇ ಕಡೆ 5 ಬ್ಯಾಟರಿ ಕಳ್ಳತನ ಮಾಡಿದ್ದರು. ಈ ಸಂಬಂಧ ದೂರು ನೀಡಿದಾಗ, ಖದೀಮರು ಸಿಕ್ಕಿ ಬಿದ್ದಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ಮೂಲದ ಮೂಲಕ ತನಿಖೆ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೆರಿಫೆರಲ್ ರಿಂಗ್ ರೋಡ್ | 2014ರ ಕಾಯ್ದೆ ಪ್ರಕಾರ ಪರಿಹಾರ ನೀಡಿ, ಇಲ್ಲ ಯೋಜನೆ ಕೈಬಿಡಿ ಎಂದ ರೈತರು

ಶಂಕಿತರು ಪ್ರಾಥಮಿಕವಾಗಿ ಬೀಗ ಹಾಕಿದ ಕಚೇರಿಗಳು ಮತ್ತು ವಾಣಿಜ್ಯ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದರು. ಇವರು ಕದ್ದ ಬ್ಯಾಟರಿಗಳನ್ನು ಆಟೋ ರಿಕ್ಷಾಗಳಲ್ಲಿ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 379 (ಕಳ್ಳತನದ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...