ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟನೆ, ₹2 ಕೋಟಿ ಲಾಭಾಂಶ ಸಿಎಂಗೆ ಹಸ್ತಾಂತರ

Date:

ಬೆಂಗಳೂರು ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು.

ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ನೆಲ ಅಂತಸ್ತು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋಯರ್ ಬೇಸ್ ಮೆಂಟ್ ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್ ಮೆಂಟ್ ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಈ ಸಂದರ್ಭದಲ್ಲಿ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ, ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ಹಿಂದೆ ಕೈಗಾರಿಕಾ ಸಚಿವರಾಗಿದ್ದಾಗ ಈ ಕಟ್ಟಡ ಕಟ್ಟಲು ಶಾಸಕ ಆರ್.ವಿ.ದೇಶಪಾಂಡೆ ಅವರು ತೀರ್ಮಾನ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರನ್ನೂ ಸನ್ಮಾನಿಸಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...