ಬೆಂಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಫುಡ್‌ ಡೆಲಿವರಿ ಬಾಯ್‌ ಸಾವು

Date:

ಹಿಂಬದಿಯಿಂದ ವೇಗವಾಗಿ ಬಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್​ ಡಿಕ್ಕಿಯಾಗಿ ಫುಡ್‌ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣ ಬಳಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಬಸ್‌ ಚಾಲನೆಗೆ ಫುಡ್‌ ಡೆಲಿವರಿ ಬಾಯ್‌ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬಸವರಾಜು ಮೃತ ಫುಡ್ ಡೆಲಿವರಿ ಬಾಯ್.

ಸೋಮವಾರ ತಡರಾತ್ರಿ 2 ಗಂಟೆ ವೇಳೆಗೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಈ ಅಪಘಾತ ಸಂಭವಿಸಿದೆ. ಬಸ್‌ ಡಿಕ್ಕಿ ಹೊಡೆದ ಪರಿಣಾಮ ಫುಡ್‌ ಡೆಲಿವರಿ ಬಾಯ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾತ್ರಿ ಡ್ಯೂಟಿಯಲ್ಲಿದ್ದ ಫುಡ್​​ ಡೆಲಿವರಿ ಬಾಯ್ ಬಸವರಾಜು ಅವರು, ಮೈಸೂರು ರಸ್ತೆ ಕಡೆಗೆ ಫುಡ್ ಡೆಲಿವರಿಗೆಂದು ತೆರಳುತಿದ್ದರು. ಇದೇ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಅತಿವೇಗದ ಚಾಲನೆಯಲ್ಲಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಂದೆ ಚಲಿಸುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಈ ಪರಿಣಾಮ ಬಸವರಾಜು ತಲೆ ಬಸ್ ಮುಂಭಾಗದ ಎಡಚಕ್ರಕ್ಕೆ ಸಿಲುಕಿದೆ. ಬಳಿಕ ಬಸ್ ಅವರ ತಲೆಯ ಮೇಲೆ ಹರಿದಿದ್ದು ಬಸವರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ವೇಗವಾಗಿ ಬಂದ್ ಹಿಂದಿನಿಂದ ಬೈಕ್‌ಗೆ ಗುದ್ದಿದ ಪರಿಣಾಮ ದೇಹವನ್ನು ಸುಮಾರು 20 ಮೀಟರ್ ನಷ್ಟು ದೂರಕ್ಕೆ ಎಳೆದೊಯ್ದಿತ್ತು ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸರ ಸಮ್ಮುಖದಲ್ಲಿಯೇ ಕೊಲೆ ಆರೋಪಿಯ ಮನೆಗೆ ಬೆಂಕಿ

ಸದ್ಯ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...