ಬೆಂಗಳೂರು | ನೇಣಿಗೆ ಶರಣಾದ ಕಾನೂನು ವಿದ್ಯಾರ್ಥಿ

Date:

  • ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
  • ಹಿಮಾಚಲ ಪ್ರದೇಶದಿಂದ ಬೆಂಗಳೂರಿಗೆ ಓದಲು ಬಂದಿದ್ದ ಆರ್ಯಕುಮಾರ್

ಖಾಸಗಿ ಕಾಲೇಜಿನ ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರ್ಯಕುಮಾರ್(23) ಸಾವನ್ನಪ್ಪಿದ ದುರ್ದೈವಿ. ಇವರು ಮೂಲತಃ ಹಿಮಾಚಲ ಪ್ರದೇಶದವರು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ 3ನೇ ವರ್ಷದ ಕಾನೂನು ಪದವಿಯಲ್ಲಿ ಓದುತ್ತಿದ್ದರು. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಡಿ.ಗ್ರೂಪ್ ಲೇಔಟ್ ಸಮೀಪದ ಶ್ರೀಗಂಧ ಕಾವಲು ಬಡಾವಣೆಯಲ್ಲಿ ಪಿಜಿಯಲ್ಲಿ ನೆಲೆಸಿದ್ದರು.

ಪಿಜಿಯ ಕೊಠಡಿಯಲ್ಲಿ ಯಾರೂ ಇಲ್ಲದಿದ್ದಾಗ ಆರ್ಯಕುಮಾರ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಈ ಘಟನೆ ನಡೆದಿದ್ದು, ಸ್ನೇಹಿತರು ಪಿಜಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಯಕುಮಾರ್ ಓದಿನ ಸಲುವಾಗಿ ಹಿಮಾಚಲ ಪ್ರದೇಶದಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಇವರು ತೀವ್ರ ಮೈಗ್ರೇನ್‌ನಿಂದ ಬಳಲುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೌಡಿಶೀಟರ್ ಕೊಲೆ | 11 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ತನಿಖೆ ವೇಳೆ ಸಾವಿಗೆ ಯಾವುದೇ ಕಾರಣ ಪತ್ತೆಯಾಗಿಲ್ಲ. ಹಾಗಾಗಿ, ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಈ ಘಟನೆ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...