ಬೆಂಗಳೂರು | 9 ತಾಲ್ಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Date:

ಬೆಂಗಳೂರು ನಗರ ಜಿಲ್ಲೆಯ ಒಂಬತ್ತು ತಾಲ್ಲೂಕು ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ಮತ್ತು ನ್ಯಾಯಾಂಗ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ, ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳ ಬಂದ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯ ಐದು ಮತ್ತು ಬೆಂಗಳೂರು ನಗರ ಜಿಲ್ಲೆಯ ನಾಲ್ಕು ತಾಲ್ಲೂಕು ಕಚೇರಿಗಳ ಮೇಲೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಪೊಲೀಸ್ ವರದಿ ಆಧರಿಸಿ ಕಚೇರಿಗಳ ಮೇಲೆ ದಿಢೀರ್ ದಾಳಿ ಮಾಡಿ ಶೋಧ ಕಾರ್ಯ ನಡೆಸುವಂತೆ‌ ಆದೇಶಿಸಿದ್ದರು. ಲೋಕಾಯುಕ್ತದ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳ ಒಂಬತ್ತು ತಂಡಗಳು ದಾಳಿ ಮಾಡಿದ್ದು, ಸದ್ಯ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಜಿಲ್ಲೆಗಳ ತಾಲ್ಲೂಕು ಕಚೇರಿಗಳ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ 599 ಪ್ರಕರಣಗಳು ಸದ್ಯ ವಿಚಾರಣೆ ಹಂತದಲ್ಲಿವೆ. ದಾಳಿ ಮಾಡಿರುವ ಒಂಬತ್ತು ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಬಗ್ಗೆ ಅಧಿಕಾರಿಗಳು ಗೌಪ್ಯ ಮಾಹಿತಿ ಸಂಗ್ರಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ

ಕಂದಾಯ ಭವನದಲ್ಲಿರುವ ಬೆಂಗಳೂರು ಉತ್ತರ ಮತ್ತು ದಕ್ಷಿಣ ತಾಲ್ಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಕಾರ್ಯಾಚರಣೆ ಪರಿಶೀಲಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...