ಬೆಂಗಳೂರು | ಮನೆ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ: ದೂರು ದಾಖಲು

Date:

ಮನೆಯ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಪ್ಪ-ಮಗ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಬೆಂಗಳೂರಿನ ಆರ್‌ ಆರ್‌ ನಗರದ ಜವರೇಗೌಡ ನಗರದಲ್ಲಿ ಡಿ.20ರಂದು ನಡೆದಿದೆ. ಮೋಹನ್ ಗೌಡ ಹಾಗೂ ಆತನ ಮಗ ತೇಜಸ್ ಆರೋಪಿಗಳು. ಕೃಷ್ಣಪ್ಪ ಹಲ್ಲೆಗೊಳಗಾದ ವ್ಯಕ್ತಿ.

ಜವರೇಗೌಡ ನಗರದ 7 ನೇ ಕ್ರಾಸ್​ನಲ್ಲಿ ಮೋಹನ್‌ ಗೌಡ ಮತ್ತು ಕೃಷ್ಣಪ್ಪ ಅವರಿಬ್ಬರ ಮನೆ ಅಕ್ಕ-ಪಕ್ಕದಲ್ಲಿ ಇದೆ. ಮನೆಯ ಮುಂದೆ ಗಾಡಿ ನಿಲ್ಲಿಸುವ ವಿಚಾರಕ್ಕೆ ಕೃಷ್ಣಪ್ಪ ಮತ್ತು ಮೋಹನ್ ಗೌಡ ಮಧ್ಯೆ ಪದೇಪದೆ ಗಲಾಟೆ ನಡೆಯುತ್ತಿತ್ತು. ಡಿ.20ರಂದು ಕೃಷ್ಣಪ್ಪ ತನ್ನ ಟಾಟಾ ಏಸ್ ಗಾಡಿಯನ್ನು ಮೋಹನ್ ಗೌಡ ಅವರ ಮನೆ ಮುಂದೆ ನಿಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮೋಹನ್ ಗೌಡ ಅವರ ಮನೆಯ ಸೀಟ್​ಗೆ ಗಾಡಿ ತಾಗಿದೆ. ಇದಕ್ಕೆ ಕೋಪಗೊಂಡು ಜಗಳ ಆರಂಭಿಸಿದ ಪಕ್ಕದ ಮನೆಯ ಮೋಹನ್ ಗೌಡ ಹಾಗೂ ಆತನ ಮಗ ತೇಜಸ್ ಗೌಡ ಕೃಷ್ಣಪ್ಪ ಅವರ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ

ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆ

ಹಾಡಹಗಲೇ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

ರಾಜಸ್ಥಾನದ ಮಾಣಿಕ್ ರಾಮ್ ಅವರ ಮನೆಯಲ್ಲಿ ದರೋಡೆ ನಡೆದಿದ್ದು, ಇವರು ಜ್ಯುವೆಲ್ಲರಿ ಶಾಪ್ ಇಟ್ಟುಕೊಂಡಿದ್ದರು.

ಮಾಣಿಕ್ ರಾಮ್ ಜ್ಯುವೆಲ್ಲರಿ ಶಾಪ ಇಟ್ಟಿರುವ ಬಗ್ಗೆ ತಿಳಿದಿದ್ದ ನಾಲ್ವರು ಅಪಾರ ಪ್ರಮಾಣದ ಹಣ, ಬಂಗಾರ, ಬೆಳ್ಳಿ ಸಿಗುತ್ತದೆ ಎಂದು ರಾಮ್ ಮನೆಗೆ ದರೋಡೆ ಮಾಡಲು ಮಧ್ಯಾಹ್ನವೇ ನುಗ್ಗಿದ್ದರು.

ಮಾಣಿಕ್ ರಾಮ್ ಪತ್ನಿ ಮಧು ಮನೆಯಲ್ಲಿ ಒಬ್ಬರೇ ಇರುವುದನ್ನು ಕಂಡು ದರೋಡೆ ಮಾಡಲು ಮನೆ ಒಳಗೆ ನುಗ್ಗಿದ್ದ ನಾಲ್ವರು ಆರೋಪಿಗಳಿಗೆ ಸಿಕ್ಕಿದ್ದು ಕೇವಲ ₹5 ಸಾವಿರ. ಜ್ಯೂವೆಲ್ಲರಿ ಅಂಗಡಿಯ ಕೆಲಸದ ಹುಡುಗ ಮನೆಗೆ ಬರುತ್ತಿದ್ದಂತೆಯೇ ಆರೋಪಿಗಳು ಆತನನ್ನು ನೂಕಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...