ಬೆಂಗಳೂರು | ಸೋರುತಿಹುದು ಹೊಸ ಮೆಟ್ರೋ ನಿಲ್ದಾಣದ ಮಾಳಿಗೆ

Date:

ಇತ್ತೀಚೆಗಷ್ಟೇ ಉದ್ಘಾಟನೆಗೊಂಡು, ಸಾರ್ವಜನಿಕರ ಬಳಕೆಗೆ ಲಭ್ಯವಾಗಿದ್ದ ವೈಟ್‌ಫೀಲ್ಡ್‌ನ ಕಾಡುಗೋಡಿ ಮೆಟ್ರೋ ನಿಲ್ದಾಣವು ಮಳೆಯಿಂದ ಸೋರುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ನೀರು ಸೋರಿಕೆಯಾಗುತ್ತಿರುವ ವಿಡಿಯೋವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವೈಟ್‌ಫೀಲ್ಡ್‌ ರೈಸಿಂಗ್ ಎಂಬ ಟ್ವಿಟರ್‌ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋ ಜೊತೆಗೆ, “ಇಲ್ಲಿ ಮಳೆಯಾಗುತ್ತಿದೆ. ನೀವು ನಿಲ್ದಾಣದಲ್ಲಿ ನಡೆದುಕೊಂಡು ಹೋಗುವಾಗ ಸ್ಪಲ್ಪ ಎಚ್ಚರ ತಪ್ಪಿದರೂ ಜಾರಿ ಬೀಳುವುದು ಖಚಿತ” ಎಂದು ಬರೆದಿದೆ.

ಭಾನುವಾರ ಸಂಜೆ ವೈಟ್‌ಫೀಲ್ಡ್‌ನಲ್ಲಿ ಸಾಧಾರಣ ಮಳೆಯಾಗಿದೆ. ಮೆಟ್ರೋ ನಿಲ್ದಾಣದ ಮೇಲ್ಭಾಗವು ಹಾಳಾಗಿದ್ದರಿಂದ ಮಳೆ ನೀರು ಸೋರಲಾರಂಭಿಸಿದೆ. ನಿಲ್ದಾಣದಲ್ಲಿ ಪ್ರಯಾಣಿಕರು ನಡೆದಾಡುವ ಭಾಗದಲ್ಲಿ ನುಣುಪಾದ ಕಲ್ಲುಗಳನ್ನು ಹಾಕಿದ್ದು, ನೀರಿನಿಂದ ಜಾರುವ ಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರು ಜಾರುತ್ತೇವೆಂಬ ಭಯದಿಂದ ಹೆಚ್ಚು ಗಮನವಿಟ್ಟುಕೊಂಡು ಓಡಾಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ತಿಂಗಳು (ಏಪ್ರಿಲ್‌) ಕಾಡುಗೋಡಿ- ಕೆಆರ್ ಪುರಂ ನಡುವೆ ಮೆಟ್ರೋ ಸಂಚಾರ ಆರಂಭಿಸಲಾಗಿತ್ತು. ಈ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಇದೇ ಮಾರ್ಗದ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣದಲ್ಲಿವೂ ಇತ್ತೀಚೆಗೆ ಮಳೆ ಸುರಿದಾಗ ಜಲಾವೃತವಾಗಿತ್ತು.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...