ಬೆಂಗಳೂರು | ನಿಯಮ ಪಾಲಿಸದ 15ಕ್ಕೂ ಹೆಚ್ಚು ಶಾಲಾ ವಾಹನಗಳ ವಶ

Date:

ಶಾಲಾ ಮಕ್ಕಳನ್ನು ಅನಧಿಕೃತವಾಗಿ ಓಮ್ನಿ ಕಾರ್‌ಗಳಲ್ಲಿ ಕರೆದುಕೊಂಡು ಹೋಗುತ್ತಿದ್ದ 15ಕ್ಕೂ ಹೆಚ್ಚು ವಾಹನಗಳನ್ನು ಅರ್‌ಟಿಒ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಲಾ ಮಕ್ಕಳನ್ನು ಅನುಮತಿಯಿಲ್ಲದ ವೈಟ್‌ಬೋರ್ಡ್‌ ಕಾರ್‌ನಲ್ಲಿ ಕರೆದುಕೊಂಡು ಹೋಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆ, ಮಂಗಳವಾರ ಆರ್‌ಟಿಒ ಅಧಿಕಾರಿಗಳು ಪರಿಶೀಲನೆ ನಡೆಸಿ, ಕಾರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

“ಬೆಂಗಳೂರಿನಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಂಚಾರದ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಮಕ್ಕಳಿಗೆ ಸುರಕ್ಷತೆ ಇಲ್ಲದ ವಾಹನಗಳಲ್ಲಿ ಅವರನ್ನು ಕರೆದುಕೊಂಡು ಹೋಗಲು ಅನುಮತಿ ಇಲ್ಲ. ಅದಕ್ಕೆ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಆರ್​ಟಿಓ ಜಂಟಿ ಆಯುಕ್ತೆ ಶೋಭಾ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಹಲವಾರು ವಾಹನಗಳ ದಾಖಲಾತಿಗಳು ಸರಿಯಾಗಿ ಇಲ್ಲ. ಬಹುತೇಕ ವಾಹನಗಳ ಟ್ಯಾಕ್ಸ್‌ ಕಟ್ಟಿಲ್ಲ. ಎಫ್‌ಸಿ ಇಲ್ಲ. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಅನುಮತಿ ಇಲ್ಲದಿದ್ದರೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಸಾರಿಗೆಯೇತರ ವಾಹನಗಳನ್ನು ಅನಧಿಕೃತವಾಗಿ ಬಳಸಿದ್ದಾರೆ. ಮಕ್ಕಳನ್ನು ಇಂತಹ ವಾಹನಗಳಲ್ಲಿ ಕಳಿಸುವಾಗ ಪೋಷಕರು ಗಮನ ಹರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? 14 ಕಡೆ ಲೋಕಾಯುಕ್ತ ದಾಳಿ: ಐದು ಮದ್ಯದಂಗಡಿ ಹೊಂದಿದ್ದ ಭೂಮಾಪನ ಇಲಾಖೆ ಅಧೀಕ್ಷಕ

“ಕೊರೊನಾ ಸಾಂಕ್ರಾಮಿಕ ರೋಗದ ಬಳಿಕ ಈಗತಾನೇ ಪುನರ್ಜನ್ಮ ಪಡೆದಿದ್ದೇವೆ. ವಾಹನ ಚಾಲಕರಿಗೆ ಹಲವಾರು ಸಮಸ್ಯೆಗಳಿವೆ. ಇದೀಗ ಆರ್‌ಟಿಒ ಅಧಿಕಾರಿಗಳು ಇದ್ದಕ್ಕಿದ್ದಂತೆ ರೇಡ್ ಮಾಡಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಎಲ್ಲೋ ಬೋರ್ಡ್‌ ವಾಹನಗಳಿಗೆ ಅರ್ಜಿ ಹಾಕಿದ್ದೇವೆ. ಆದರೆ, ಅನುಮತಿ ನೀಡಿಲ್ಲ. ನಮ್ಮ ವಾಹನಗಳನ್ನು ಬಿಡದೆ ಇದ್ದರೆ, ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ” ಎಂದು ಕರ್ನಾಟಕ ರಾಜ್ಯ ಖಾಸಗಿ ಶಾಲಾ ವಾಹನ ಸಂಘದ ಅಧ್ಯಕ್ಷ ಸೋಮಶೇಖರ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...