ಬೆಂಗಳೂರು | ₹1,500 ಹಣದ ಸಂಧಾನಕ್ಕೆ ತೆರಳಿದ ವ್ಯಕ್ತಿಯ ಕೊಲೆ

Date:

ಸ್ನೇಹಿತರ ಹಣದ ವಿಚಾರದಲ್ಲಿ ಸಂಧಾನ ಮಾಡಲು ಹೋದ ಕೂಲಿ ಕಾರ್ಮಿಕನೊಬ್ಬನನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಸಂದ್ರದಲ್ಲಿ ಈ ಘಟನೆ ನಡೆದಿದೆ. ಸಿಂಗಸಂದ್ರ ನಿವಾಸಿ ಗೋಪಾಲ (35) ಕೊಲೆಯಾದ ಕೂಲಿ ಕಾರ್ಮಿಕ. ಕೃತ್ಯ ಎಸಗಿದ ಎಲೆಕ್ಟ್ರಿಷಿಯನ್‌ ಗಿರೀಶ್‌ ತಲೆಮರೆಸಿಕೊಂಡಿದ್ದಾನೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ವ್ಯಕ್ತಿ ಗೋಪಾಲ ಸ್ನೇಹಿತ ಕರಿಗೌಡ ಎಂಬಾತನಿಂದ ಆರೋಪಿ ಗಿರೀಶ್‌ ₹1,500 ಸಾಲ ಪಡೆದುಕೊಂಡಿದ್ದನು. ಆದರೆ, ಹಣವನ್ನು ಹಿಂತಿರುಗಿಸದೇ ಸತಾಯಿಸುತ್ತಿದ್ದನು. ಕರಿಗೌಡ ಈ ಬಗ್ಗೆ ಗೋಪಾಲನ ಬಳಿ ಹೇಳಿಕೊಂಡಿದ್ದನು.

ಹೀಗಾಗಿ, ಗೋಪಾಲ ಆರೋಪಿ ಗಿರೀಶ್‌ಗೆ ಕರೆ ಮಾಡಿ, ಕರಿಗೌಡನ ಹಣ ವಾಪಸ್‌ ಕೊಡುವಂತೆ ಎಚ್ಚರಿಕೆ ನೀಡಿದ್ದಾನೆ. ಆಗ ಗಿರೀಶ್‌ ಹಣ ಕೊಡುವುದಾಗಿ ಹೇಳಿದ್ದನು.

ಈ ನಡುವೆ, ಗೋಪಾಲ, ಕರಿಗೌಡ ಹಾಗೂ ಮತ್ತೋರ್ವ ಸ್ನೇಹಿತ್ ಶಶಿಧರ್ ಮೂವರು ಸೇರಿ ಡಿ.2ರಂದು ಬಾರ್‌ವೊಂದರಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು. ಈ ವೇಳೆ, ಗಿರೀಶ್‌ ಕೂಡ ತನ್ನ ಸ್ನೇಹಿತ್ ಪ್ರದೀಪ್‌ ಜತೆಗೆ ಬಾರ್‌ಗೆ ಬಂದಿದ್ದಾನೆ.

ಗಿರೀಶ್‌ನನ್ನು ಕಂಡ ಕರಿಗೌಡ ಆತನನ್ನು ಕರೆದು ಹಣ ನೀಡುವಂತೆ ಕೇಳಿದ್ದಾನೆ. ಆತ ಬೇರೆಯವರ ಕಡೆಯಿಂದ ‘ನೀನು ಕರೆ ಮಾಡಿಸಿ ಬೆದರಿಕೆ ಹಾಕಿದ್ದೀಯಾ ಹಣ ನೀಡುವುದಿಲ್ಲ. ಏನು ಮಾಡಿಕೊಳ್ಳುತ್ತಿಯಾ ಮಾಡಿಕೋ ಎಂದಿದ್ದಾನೆ’. ಇದರಿಂದ ಸಿಟ್ಟಿಗೆದ್ದ ಗೋಪಾಲ್ ಗಿರೀಶ್​ಗೆ ಹೊಡೆದಿದ್ದನು. ಬಳಿಕ ಇತರೆ ಸ್ನೇಹಿತರು ಸಂಧಾನ ಮಾಡಿದ್ದಾರೆ. ಆಗ ಗಿರೀಶ್ ಫೋನ್‌ ಪೇ ಮೂಲಕ ಕರಿಗೌಡನ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾನೆ.

ಈ ಘಟನೆ ನಂತರ ಎಲ್ಲರೂ ಮನೆಗೆ ತೆರಳಿದ್ದಾರೆ. ಮನೆಗೆ ತೆರಳಿದ ಗಿರೀಶ್ ಕೋಪಗೊಂಡು ಗೋಪಾಲ್‌ ಸ್ನೇಹಿತ್ ಶಶಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಇದರಿಂದ ಮತ್ತೆ ಸಿಟ್ಟಿಗೆದ್ದ ಗೋಪಾಲ್​, ಕರಿಗೌಡ ಹಾಗೂ ಶಶಿ ಮೂವರು ಗಿರೀಶ್ ಮನೆಗೆ ತೆರಳಿದ್ದಾರೆ. ಗಿರೀಶ್‌ಗೆ ಸರಿಯಾಗಿ ಮಾತನಾಡುವಂತೆ ಹೇಳಿ, ಇಲ್ಲವಾದರೆ ಪರಿಣಾಮ ಸರಿ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಗಿರೀಶ್​ನ ಪತ್ನಿ ತಪ್ಪಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸೇಡು ತೀರಿಸಿಕೊಳ್ಳಲು ಪತಿ ಮೊಬೈಲ್‌ನಿಂದ ಬಾಂಬ್‌ ಬೆದರಿಕೆ ಸಂದೇಶ ರವಾನಿಸಿದ ಪತ್ನಿ: ಬಂಧನ

ಮಾತನಾಡುವ ಸಮಯದಲ್ಲಿ ಅಡುಗೆ ಮನೆಯಿಂದ ಚಾಕು ತಂದ ಗಿರೀಶ್‌, ಗೋಪಾಲನ ಬೆನ್ನು ಹಾಗೂ ಎದೆ ಭಾಗಕ್ಕೆ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ತಕ್ಷಣವೇ ಗಾಯಗೊಂಡಿದ್ದ ಗೋಪಾಲನನ್ನು ಸ್ನೇಹಿತರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಗೋಪಾಲ ಸಾವನ್ನಪ್ಪಿದ್ದಾನೆ.

ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಗಿರೀಶ್​ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...