ಬೆಂ-ಮೈ ಎಕ್ಸ್‌ಪ್ರೆಸ್‌ ವೇ | ನಿರ್ಬಂಧಿತ ವಾಹನ ಸಂಚಾರ; ಮೊದಲ ದಿನವೇ ₹68,500 ದಂಡ ಸಂಗ್ರಹ

Date:

  • ಎಕ್ಸ್‌ಪ್ರೆಸ್‌ ವೇ ಪ್ರವೇಶಿಸುವ ನಿರ್ಬಂಧಿತ ವಾಹನಗಳಿಗೆ ₹500 ದಂಡ
  • ನಿರ್ಬಂಧಿತ ವಾಹನಗಳು ಸರ್ವೀಸ್‌ ರಸ್ತೆ ಬಳಸಿ ಪ್ರಯಾಣಿಸುವಂತೆ ಸೂಚನೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳು ಹೆಚ್ಚಾದ ಕಾರಣ ದ್ವಿಚಕ್ರ, ತ್ರಿಚಕ್ರ, ಟ್ಯಾಕ್ಟರ್ ಸೇರಿದಂತೆ ಇನ್ನಿತರ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಈ ನಿಯಮವು ಆಗಸ್ಟ್‌ 1ರಿಂದ ಜಾರಿಯಾಗಿದ್ದು, ಮೊದಲು ದಿನವೇ ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸಿ ನಿರ್ಬಂಧಿತ ವಾಹನಗಳಿಂದ ₹68,500 ದಂಡ ಸಂಗ್ರಹಿಸಲಾಗಿದ್ದು, ಒಟ್ಟು 137 ಪ್ರಕರಣ ದಾಖಲಾಗಿವೆ.

ಎಕ್ಸ್‌ಪ್ರೆಸ್‌ ವೇಯಲ್ಲಿ ಸಂಚಾರ ನಡೆಸುತ್ತಿರುವ ವಾಹನಗಳನ್ನು ತಡೆದು ಸರ್ವೀಸ್‌ ರಸ್ತೆಯಲ್ಲಿ ಪ್ರಯಾಣಿಸುವಂತೆ ಪೊಲೀಸರು ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಸವಾರರಿಗೆ ಮಾಹಿತಿ ನೀಡುತ್ತಿದ್ದಾರೆ. ಅಲ್ಲದೇ, ಎಕ್ಸ್‌ಪ್ರೆಸ್‌ ವೇ ಪ್ರವೇಶ ಕೇಂದ್ರ ಮತ್ತು ಟೋಲ್ ಗೇಟ್‌ಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರ ನಿಷೇಧದ ಬಗ್ಗೆ ಬೋರ್ಡ್‌ ಹಾಕಲಾಗಿದೆ.

ಸ್ಕೂಟರ್‌ಗಳು, ಇತರ ದ್ವಿಚಕ್ರ ವಾಹನಗಳು, ಇ-ಕಾರ್ಟ್‌ಗಳು, ಇ-ರಿಕ್ಷಾಗಳು, ತ್ರಿಚಕ್ರ ವಾಹನಗಳು, ಮೋಟಾರುರಹಿತ ವಾಹನಗಳು, ಟ್ರ್ಯಾಕ್ಟರ್‌ಗಳು, ಮಲ್ಟಿ-ಆಕ್ಸಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು ಹಾಗೂ ಕ್ವಾಡ್ರಿಸೈಕಲ್‌ಗಳ ಸಂಚಾರಕ್ಕೆ ನಿರ್ಬಂಧಿಸಲು ಜುಲೈ 12ರಂದು ಎನ್‌ಎಚ್‌ಎಐ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 1 ರಿಂದ ಎಕ್ಸ್‌ಪ್ರೆಸ್‌ ವೇಯಲ್ಲಿ ಸಂಚರಿಸಲು ನಿರ್ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ಬಂಧದ ಅರಿವಿಲ್ಲದೆ ಅನೇಕ ದ್ವಿಚಕ್ರ ವಾಹನ ಸವಾರರು ಪಂಚಮುಖಿ ಗಣೇಶ ದೇವಸ್ಥಾನದ ಬಳಿ ನೈಸ್ ರಸ್ತೆ ಜಂಕ್ಷನ್ ನಂತರ ನಗರದ ಹೊರವಲಯದಲ್ಲಿ ಪ್ರಾರಂಭವಾಗುವ ಎಕ್ಸ್‌ಪ್ರೆಸ್‌ ವೇಗೆ ಪ್ರವೇಶಿಸಲು ಪ್ರಯತ್ನಿಸಿದರು. ಅವರನ್ನು ಪೊಲೀಸರು ಮತ್ತು ಎನ್‌ಎಚ್‌ಎಐ ಸಿಬ್ಬಂದಿ ತಡೆದು ಸರ್ವೀಸ್ ರಸ್ತೆಯಲ್ಲಿ ತೆರಳುವಂತೆ ಸೂಚನೆ ನೀಡಿದರು.

“ನಿಷೇಧವು ಮಂಗಳವಾರದಿಂದ ಜಾರಿಗೆ ಬಂದಿದೆ. ಅನೇಕ ವಾಹನ ಬಳಕೆದಾರರಿಗೆ ವಿಶೇಷವಾಗಿ ದ್ವಿಚಕ್ರ ವಾಹನ ಸವಾರರಿಗೆ ಈ ಸಂಚಾರ ನಿರ್ಬಂಧದ ಬಗ್ಗೆ ತಿಳಿದಿರಲಿಲ್ಲ. ನಿಷೇಧದ ಬಗ್ಗೆ ಅವರಿಗೆ ತಿಳಿಸಿದ್ದೇವೆ” ಎಂದು ಎನ್‌ಎಚ್‌ಎಐ ಸಿಬ್ಬಂದಿ ಹೇಳಿದರು.

ಇದೇ ವೇಳೆ, ದ್ವಿಚಕ್ರ ವಾಹನ ಸವಾರರು ಮತ್ತು ಗೂಡ್ಸ್ ಆಟೋಗಳ ಚಾಲಕರು ನಿರ್ಬಂಧದ ಬಗ್ಗೆ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಿಷೇಧವು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳ ಸಂಖ್ಯೆಯನ್ನು ಹೇಗೆ ತಡೆಯುತ್ತದೆ ಎಂದು ಪೊಲೀಸರನ್ನು ಪ್ರಶ್ನಿಸಿದರು.

“ದ್ವಿಚಕ್ರ ವಾಹನಗಳು ಮತ್ತು ಇತರ ವಾಹನಗಳು ಸರ್ವಿಸ್ ರಸ್ತೆಯನ್ನು ಬಳಸಲು ಹೇಳುತ್ತಿದ್ದಾರೆ. ಆದರೆ, ಸರ್ವೀಸ್ ರಸ್ತೆ ಎಲ್ಲಿದೆ? ಸರ್ವೀಸ್‌ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಅಲ್ಲಿ ಸಂಚರಿಸುವುದು ಕಷ್ಟಕರವಾಗಿದೆ” ಎಂದು ಪ್ರಯಾಣಿಕ ಪ್ರಕಾಶ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ. 140 ಹೆಚ್ಚಳ

“ಎಕ್ಸ್‌ಪ್ರೆಸ್‌ ವೇ ಪ್ರವೇಶಿಸುವ ನಿರ್ಬಂಧಿತ ವಾಹನಗಳಿಗೆ 500 ರೂಪಾಯಿ ದಂಡ ವಿಧಿಸಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಇಂದಿನಿಂದ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಪ್ರವೇಶ ಮತ್ತು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮಂಗಳವಾರ 137 ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಾಗಿವೆ. ₹68,500 ದಂಡ ವಿಧಿಸಲಾಗಿತದೆ. ಪ್ರವೇಶ ನಿರ್ಬಂಧವಿರುವ ಕಾರಣ ಸದರಿ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಸಬೇಕಾಗಿ ವಿನಂತಿ” ಎಂದು ರಾಮನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಾರ್ತಿಕ್ ರೆಡ್ಡಿ ಟ್ವೀಟ್​ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...