ಬೆಂಗಳೂರು | ಮತದಾನದ ದಿನ ಜಾಗೃತಿ ಮೂಡಿಸಲು ‘ನಮ್ಮ ನಡೆ ಮತಗಟ್ಟೆಯ ಕಡೆ’ ಅಭಿಯಾನ

Date:

  • ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರು
  • ಬೆಂಗಳೂರಿನಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆ ಹೆಚ್ಚಾಗಿದ್ದು 1,43,526 ಮತದಾರರು

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ಹಿನ್ನಲೆ, ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಚುನಾವಣಾ ಆಯೋಗ ನಿರ್ಧರಿಸಿದೆ.

ಮುಖ್ಯ ಚುನಾವಣಾಧಿಕಾರಿಯವರ ಸುತ್ತೋಲೆಯಂತೆ, “ಪ್ರಸ್ತುತ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದ್ದು, ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ಏಪ್ರಿಲ್ 30 ರಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರಿದ್ದು, ಈ ಪೈಕಿ 50,24,775 ಪುರುಷ, 46,86,813 ಮಹಿಳೆ, 1,761 ಇತರೆ ಹಾಗೂ 1,760 ಸೇವಾ ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ 1,43,526 ಯುವ ಮತದಾರಿದ್ದು, ಈ ಬಾರಿ ಯುವ ಮತದಾರರ ಸಂಖ್ಯೆ ಹೆಚ್ಚಾಗಿದೆ. 80+ ವಯಸ್ಸಿನ ಮತದಾರರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 29 ರಿಂದ ಮೇ 6ನೇ ತಾರೀಖಿನವರೆಗೂ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ₹50 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ‌ ಜಿಲ್ಲಾ‌ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ‌ ಜೊತೆ ಸಭೆ ನಡೆಸಿ ಸಂಪೂರ್ಣ ವಿವರಣೆ ನೀಡಿದರು.­­­­

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...