ಬೆಂಗಳೂರು | ಹೊರರೋಗಿ ವಿಭಾಗಕ್ಕೆ 4 ಅಂತಸ್ತಿನ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾದ ನಿಮ್ಹಾನ್ಸ್

Date:

  • ಕಟ್ಟಡ ನಿರ್ಮಾಣಕ್ಕೆ ₹280 ಕೋಟಿ ವೆಚ್ಚ ಸಾಧ್ಯತೆ: ಡಾ ಪ್ರತಿಮಾ ಮೂರ್ತಿ
  • ದೂರದ ಊರುಗಳಿಂದ ಬರುವ ರೋಗಿಗಳಿಗೆ ಆರಾಮದಾಯಕ ವಾತಾವರಣ

ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯಲು ಹಾಗೂ ವೈದ್ಯರ ಭೇಟಿ ಮಾಡಲು ರೋಗಿಗಳು ಬೆಳಗ್ಗೆ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೋಕನ್ ಪಡೆದು ಕಾಯುತ್ತಾರೆ. ಇದೀಗ ಈ ಸಮಸ್ಯೆಯನ್ನು ದೂರ ಮಾಡಲು ನಿಮ್ಹಾನ್ಸ್‌ ಆಸ್ಪತ್ರೆ ಮುಂದಾಗಿದ್ದು, ಹೊರರೋಗಿಗಳ ವಿಭಾಗಕ್ಕೆಂದೇ ನಿಮ್ಹಾನ್ಸ್ 4 ಅಂತಸ್ತಿನ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲು ನಿರ್ಧರಿಸಿದೆ.

“₹280 ಕೋಟಿವರೆಗೆ ಕಟ್ಟಡ ನಿರ್ಮಾಣಕ್ಕೆ ವೆಚ್ಚವಾಗಬಹುದು. ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಪಡೆಯಲು ಹಾಗೂ ಧನಸಹಾಯಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ. 1990ರ ಮಧ್ಯಭಾಗದಲ್ಲಿ ಸರಾಸರಿ 400 ರಿಂದ 500 ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಇದೀಗ, ಈ ಸಂಖ್ಯೆ ಆರು ಪಟ್ಟು ಹೆಚ್ಚಾಗಿದೆ. ದಿನಕ್ಕೆ 2,000 ರಿಂದ 2,500 ಹೊರರೋಗಿಗಳು ಆಸ್ಪತ್ರೆಗೆ ಭೇಟಿ ಮಾಡುತ್ತಾರೆ. ಆಸ್ಪತ್ರೆಯ ರೋಗಿಗಳಿಗೆ ಆರಾಮದಾಯಕವಾಗಿಸಲು ಬಯಸುತ್ತೇವೆ” ನಿಮ್ಹಾನ್ಸ್‌ನ ನಿರ್ದೇಶಕಿ ಡಾ ಪ್ರತಿಮಾ ಮೂರ್ತಿ ತಿಳಿಸಿದರು.

“ಈಗಿರುವ ಓಪಿಡಿ ಹಿಂದೆಯೇ ಹೊಸ ಓಪಿಡಿ ನಿರ್ಮಿಸಲಾಗುವುದು. ಅಸ್ತಿತ್ವದಲ್ಲಿರುವ ಒಂದು ಓಪಿಡಿಯನ್ನು ಮುಚ್ಚಲಾಗುವುದು. ಸಿಬ್ಬಂದಿ ಮತ್ತು ವೈದ್ಯಕೀಯ ಉಪಕರಣಗಳನ್ನು ಹೊಸ ಆವರಣಕ್ಕೆ ವರ್ಗಾಯಿಸಲಾಗುತ್ತದೆ. ಈಗಿರುವ ಉದ್ಯಾನವನವನ್ನು ಸುಂದರ ಉದ್ಯಾನವನ್ನಾಗಿ ಪರಿವರ್ತಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೋಗಿಗಳು ದೂರದ ಊರುಗಳಿಂದ ಬರುತ್ತಾರೆ. ಆಸ್ಪತ್ರೆಯಲ್ಲಿ ಆರಾಮದಾಯಕವಾಗಿ ಅವರು ಕುಳಿತುಕೊಳ್ಳಬಹುದು. ಇದರಿಂದ ಅವರ ಒತ್ತಡದ ಮಟ್ಟವನ್ನು ಕಡಿಮೆ ಮಾಡಬಹುದು” ಎಂದು ಡಾ ಪ್ರತಿಮಾ ಹೇಳಿದರು.

“ರೋಗಿಗಳ ಕಾಯುವ ಅವಧಿಯನ್ನು ಸುಧಾರಿಸಲು ನಿಮ್ಹಾನ್ಸ್ ಈಗಾಗಲೇ ಕೆಲವು ಕ್ರಮಗಳನ್ನು ಕೈಗೊಂಡಿದೆ. ವಯಸ್ಸಾದವರಿಗೆ, ಗರ್ಭಿಣಿಯರಿಗೆ ಹಾಗೂ ಮಕ್ಕಳಿರುವವರಿಗೆ ಪ್ರತ್ಯೇಕ ಸರತಿ ಸಾಲು ಪ್ರಾರಂಭಿಸಿದ್ದೇವೆ. ಇದು ಅವರಿಗೆ ಸಹಾಯ ಮಾಡಿದೆ” ಎಂದು ಹಿರಿಯ ಮನೋವೈದ್ಯಶಾಸ್ತ್ರದ ಪ್ರಾಧ್ಯಾಪಕರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬ್ರ್ಯಾಂಡ್ ಬೆಂಗಳೂರು | ಸ್ವಚ್ಛ ನಗರಕ್ಕೆ ನಾಗರಿಕರಿಂದ 10,479 ಸಲಹೆ

“ರೋಗಿಗಳ ಪ್ರತಿಕ್ರಿಯೆಗಾಗಿ ಸಮೀಕ್ಷೆ ನಡೆಸಲಾಗಿತ್ತು. ಈ ವೇಳೆ, ಹಲವರು ಕಾಯುವ ಅವಧಿ ಹಾಗೂ ಹಣ ನೀಡುವಂತೆ ಸಿಬ್ಬಂದಿ ಒತ್ತಾಯಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...