ಬೆಂಗಳೂರು | ನಿಲ್ಲದ ಬೈಕ್ ವ್ಹೀಲಿಂಗ್; ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಕುತ್ತು ಬಂದಂತಾಗಿದೆ. ನಗರ ಸಂಚಾರ ಪೊಲೀಸರು ವ್ಹೀಲಿಂಗ್ ಮಾಡುವವರನ್ನು ಬಂಧಿಸುತ್ತಿದ್ದಾರೆ ಮತ್ತು ದಂಡ ವಿಧಿಸುತ್ತಿದ್ದಾರೆ. ಆದರೂ, ಯುವಕರ ಅತಿರೇಕದ ಹುಚ್ಚಾಟಕ್ಕೆ ಕೊನೆ ಇಲ್ಲದಂತಾಗಿದೆ. ಇದೀಗ ನಗರದ ವೈಟ್‌ಫೀಲ್ಡ್‌ ಮೆಟ್ರೋ ನಿಲ್ದಾಣದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಯುವಕನೊಬ್ಬ ವ್ಹೀಲಿಂಗ್ ಮಾಡಿದ್ದು, ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾನೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಥರ್ಡ್‌ ಐ ಎಂಬ ಯುಟ್ಯೂಬರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸರಿಗೆ ಮನವಿ ಮಾಡಿದ್ದಾರೆ.

“ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವ್ಯಕ್ತಿಯೊಬ್ಬ ವ್ಹೀಲಿಂಗ್ ಮಾಡುತ್ತಿದ್ದಾನೆ. ವಿಡಿಯೊ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ. ವ್ಹೀಲಿಂಗ್ ಮಾಡುತ್ತಿರುವ ಬೈಕ್‌ನ ನಂಬರ್ ಪ್ಲೇಟ್‌ ಇಲ್ಲ. ಆದರೆ, ನಾನು ಗಾಡಿಯ ನಂಬರ್ ಕಂಡು ಹಿಡಿದಿದ್ದೇನೆ. ಬೈಕ್ ನ ನೋಂದಣಿ ಸಂಖ್ಯೆ KA53HB3623 ಇಂತಿದೆ” ಎಂದು ಥರ್ಡ್‌ ಐ ಯುಟ್ಯೂಬರ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ವ್ಹೀಲಿಂಗ್ ಮಾಡುವವರಿಗೆ ಇನ್‌ಸ್ಟಾಗ್ರಾಮ್ ಪ್ರೋತ್ಸಾಹ ನೀಡುತ್ತಿದೆ. ಅಲ್ಲದೆ, ಇನ್‌ಸ್ಟಾಗ್ರಾಮ್‌ನಲ್ಲಿ ಇಂತಹ ಸಾಹಸಗಳನ್ನು ಪ್ರಚಾರ ಮಾಡುವ ಹಲವಾರು ಪ್ರೊಫೈಲ್‌ಗಳಿವೆ. ಇಂತಹ ಸ್ಟಂಟ್‌ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ” ಎಂದು ಬೆಂಗಳೂರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿ ಮೇಲೆ ಅತ್ಯಾಚಾರಗೈದ ಮೂವರ ಬಂಧನ

ಯೂಟ್ಯೂಬರ್ ಪೋಸ್ಟ್​ಗೆ ವೈಟ್‌ಫೀಲ್ಡ್ ಟ್ರಾಫಿಕ್ ಪೊಲೀಸರು ಪ್ರತಿಕ್ರಿಯೆ ನೀಡಿ ತಪ್ಪಿತಸ್ಥರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ವೈಟ್‌ಫೀಲ್ಡ್‌ ಬಳಿ ವ್ಹೀಲಿಂಗ್ ಮಾಡುತ್ತಿರುವ ಯುವಕನನ್ನು ನಿರಂಜನ್ (18) ಎಂದು ಗುರುತಿಸಲಾಗಿದೆ. ಈತನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವ್ಹೀಲಿಂಗ್ ಮಾಡುವ ಅನೇಕ ವಿಡಿಯೊಗಳಿವೆ. ಈತನ ಇನ್‌ಸ್ಟಾಗ್ರಾಮ್ ಬಯೋದಲ್ಲಿ, ‘ವೀಲಿಂಗ್ ಲವ್ವರ್’ ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...