ಕರ್ನಾಟಕ ಬಂದ್‌ | ಸೆ.28ರ ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

Date:

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಸೆ.29 ರಂದು ‘ಕರ್ನಾಟಕ ಬಂದ್’ ಇದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ, ಬೆಂಗಳೂರಿನಲ್ಲಿ ಸೆ. 28 ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಶುಕ್ರವಾರ ದಿನವಿಡೀ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

“ಹಲವಾರು ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ. ನಾಳೆಯ ಬಂದ್‌ಗೂ ಸಹ ರ‍್ಯಾಲಿ ಮತ್ತು ಮೆರವಣಿಗೆ ನಡೆಸಲು ಅವಕಾಶ ಇಲ್ಲ. ಸೆ.28 ರ ಮಧ್ಯರಾತ್ರಿಯಿಂದ ಸೆ.29 ರ ಮಧ್ಯರಾತ್ರಿಯವರೆಗೂ ಸಾರ್ವಜನಿಕ ಸಭೆ ನಿಷೇಧಿಸಲಾಗಿದೆ” ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದರು.

“ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಬಂದ್‌ ಮಾಡುವಂತಿಲ್ಲ. ಸಾರ್ವಜನಿಕರ ಜೀವನಕ್ಕೆ ಸಮಸ್ಯೆ ಉಂಟು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಬಂದ್ ಸಮಯದಲ್ಲಿ ಯಾವುದೇ ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟ ಉಂಟಾದರೆ ಅದಕ್ಕೆ ಬಂದ್ ಕರೆ ನೀಡಿದವರೇ ಹೊಣೆಯಾಗುತ್ತಾರೆ. ಸಾರ್ವಜನಿಕರಿಗೆ ಬಲವಂತವಾಗಿ ಬಂದ್ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದರೆ ಸಮಸ್ಯೆ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾವೇರಿ | ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದ ಕರವೇ ಮಹಿಳಾ ಹೋರಾಟಗಾರರು

“ಬಂದ್ ದಿನ ಕೆಎಸ್​ಆರ್​ಪಿ, ಹೋಮ್ ಗಾರ್ಡ್‌, ಆರ್​ಎಎಫ್ ಹಾಗೂ ನಗರದ ಎಲ್ಲ ಪೊಲೀಸರು ಭದ್ರತೆಯಲ್ಲಿ ಇರುತ್ತಾರೆ” ಎಂದು ತಿಳಿಸಿದರು.

“ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿಸಿದರೆ, ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...