ಬೆಂಗಳೂರು | ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಬಂಧನ

Date:

  • ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲು
  • ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ದ ಆರೋಪಿ

ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅರೆ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿ, ಅವರಿಂದ ₹20 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಕೇರಳ ಮೂಲದ 23 ವರ್ಷದ ಬೆಸ್ಟಿನ್ ರಾಯ್ ಬಂಧಿತ ವ್ಯಕ್ತಿ. ಈತ ನಗರದ ಕೆಂಗೇರಿ ಬಳಿಯ ಕಾಲೇಜ್‌ವೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಕೆಂಗೇರಿಯಲ್ಲಿ ಅಪಾರ್ಟ್‌ಮೆಂಟ್‌ವೊಂದನ್ನು ಬಾಡಿಗೆಗೆ ಪಡೆದು ನೆಲೆಸಿದ್ದನು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆರೋಪಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರಿಗೆ ಮಾದಕ ದ್ರವ್ಯಗಳನ್ನು ಮಾರಾಟ ಮಾಡಿದ್ದಾನೆ. ನಿಯಮಿತವಾಗಿ ಡ್ರಗ್ಸ್ ಸರಬರಾಜು ಮಾಡುವ ಜಾಲವನ್ನು ನಿರ್ಮಾಣ ಮಾಡಿಕೊಂಡಿದ್ದಾನೆ. ನಗರದ ಹಲವು ಕಾಲೇಜುಗಳ ಸುತ್ತ ಸುಳಿದಾಡುತ್ತಾ ಡ್ರಗ್ಸ್‌ ಮಾರಾಟ ಮಾಡಲು ಪ್ರಾರಂಭಿಸಿದ್ದಾನೆ. ಬಂಧಿತ ರಾಯ್ ಕೂಡ ಮಾದಕ ವ್ಯಸನಿಯಾಗಿದ್ದು, ವಿದ್ಯಾರ್ಥಿಗಳಿಗೆ ಮಾರಾಟಕ್ಕಾಗಿ ನಿಷಿದ್ಧ ವಸ್ತುಗಳನ್ನು ಸಂಗ್ರಹಿಸಿದ್ದಾನೆ. ಈತನನ್ನು ಮೊದಲ ಬಾರಿಗೆ ಬಂಧಿಸಲಾಗಿದೆ. ಈತನು ಎಲ್ಲಿಂದ ಮಾದಕ ವಸ್ತುಗಳನ್ನು ಪಡೆಯುತ್ತಿದ್ದಾನೆ ಎಂಬ ಬಗ್ಗೆ ಮಾಹಿತಿ ಪತ್ತೆಯಾಗಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವನಗುಡಿ ಪೊಲೀಸರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾದಚಾರಿ ಮಹಿಳೆ ಮೇಲೆ ಹರಿದ ಬಿಬಿಎಂಪಿ ಕಸದ ಲಾರಿ : ಸಾವು

ಕೊಕೇನ್ ದಂಧೆಕೋರರ ಮೇಲೆ ಸಿಸಿಬಿ ಕ್ರಮ

ಬೆಂಗಳೂರಿನ ಕಾಡುಗೋಡಿಯಲ್ಲಿ ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದಕ್ಷಿಣ ಆಫ್ರಿಕಾದ ಪ್ರಜೆಯೊಬ್ಬನನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಕಾಡುಗೋಡಿ ನಿವಾಸಿ ಮಾರ್ಕ್ ಎಂಬುವರಿಂದ ₹1 ಲಕ್ಷ ಮೌಲ್ಯದ 70 ಗ್ರಾಂ ಕೊಕೇನ್ ಹಾಗೂ ಸ್ಕೂಟರ್ ಜಪ್ತಿ ಮಾಡಿದ್ದಾರೆ. ಮಾರ್ಕ್ ಬ್ಯುಸಿನೆಸ್ ವೀಸಾದ ಮೇಲೆ ಬೆಂಗಳೂರಿನಲ್ಲಿದ್ದರು. ತ್ವರಿತವಾಗಿ ಹಣ ಗಳಿಸಲು ಡ್ರಗ್ಸ್ ಮಾರಾಟ ಮಾಡುತ್ತಿದ್ದರು.

ಕಾಡುಗೋಡಿ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮಾರ್ಕ್‌ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಡ್ರಗ್ಸ್ ಸಂಗ್ರಹಿಸಲು ಡಿಕ್ಷನರಿಯಂತೆ ಕಾಣುವಂತೆ ಮಾರ್ಪಡಿಸಿದ ಲಾಕರ್ ಅನ್ನು ಬಳಸುತ್ತಿದ್ದರು. ಕೊಕೇನ್ ಸಂಗ್ರಹಿಸುವ ಸಣ್ಣ ಜಾಲವನ್ನು ಅಭಿವೃದ್ಧಿಪಡಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...