ಬೆಂಗಳೂರು | ಅಲ್ಪಾವಧಿ ಸಾಲ ನೀಡುವ ಜಾಲದ ಕುರಿತು ಎಚ್ಚರವಿರಲಿ ಎಂದ ಪೊಲೀಸರು

Date:

ಸಾಲವನ್ನು ಪಡೆಯುವುದು ಈಗ ಸರಳ ಹಾಗೂ ಸುಲಭವಾಗಿದೆ. ಆ್ಯಪ್‌ಗಳ ಮುಖಾಂತರ ಕ್ಷಣ ಮಾತ್ರದಲ್ಲಿ ಲೋನ್ ಪಡೆಯುವಂತಹ ವ್ಯವಸ್ಥೆ ಇದೀಗ ಜಾರಿಯಲ್ಲಿದೆ. ಆದರೆ, ಇದರಿಂದ ಅನುಕೂಲ ಇರುವುದಕ್ಕಿಂತ ಜನರಿಗೆ ಅನಾನುಕೂಲವೇ ಹೆಚ್ಚಾಗಿದೆ.

ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್‌ನಲ್ಲಿ ಚೈನಿ ಸೇರಿದಂತೆ ಹಲವಾರು ಅಕ್ರಮ ಸಾಲದ ಅಪ್ಲಿಕೇಶನ್‌ಗಳು ಲಭ್ಯವಿವೆ. ಅವಶ್ಯಕತೆಗೆ ಹಲವು ಜನ ಈ ಆ್ಯಪ್‌ಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಹಣ ಪಡೆಯುತ್ತಾರೆ. ಬಳಿಕ ಈ ಆ್ಯಪ್‌ ಕಂಪನಿಗಳು ಜನರಿಗೆ ಹೆಚ್ಚಿನ ಬಡ್ಡಿ ದರ ವಿಧಿಸಿ, ಕಟ್ಟದೆ ಇದ್ದಾಗ ಹಿಂಸೆ ನೀಡಲು ಪ್ರಾರಂಭ ಮಾಡುತ್ತವೆ. ಜತೆಗೆ ನಿಮ್ಮ ಫೋಟೋ ಎಲ್ಲ ದಾಖಲೆಗಳನ್ನು ಸಂಗ್ರಹಿಸಿಕೊಂಡು ಬ್ಲ್ಯಾಕ್‌ ಮೇಲ್ ಮಾಡಲು ಮುಂದಾಗುತ್ತವೆ. ಹಾಗಾಗಿ, ಇಂತಹ ಆ್ಯಪ್‌ಗಳಿಂದ ಸಾಲ ಪಡೆಯುವ ಮುನ್ನ ಎಚ್ಚರವಾಗಿರಿ ಎಂದು ಬೆಂಗಳೂರು ನಗರ ಪೊಲೀಸ್ ತಿಳಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿದ ಬೆಂಗಳೂರು ನಗರ ಪೊಲೀಸ್‌, “ಹಲವಾರು ಅಪ್ಲಿಕೇಶನ್‌ಗಳ ಮೂಲಕ ಅಲ್ಪಾವಧಿಯ ಸಾಲಗಳನ್ನು ನೀಡಿ ನಂತರದಲ್ಲಿ ಸಾಲ ಪಡೆದವರಿಗೆ ಬೆದರಿಕೆ ಹಾಕಿ ವಿಪರೀತ ಬಡ್ಡಿ ದರ ವಿಧಿಸಿ ಸುಲಿಗೆ ಮಾಡುವ ವಂಚಕರ ಜಾಲದ ಕುರಿತಾಗಿ ಎಚ್ಚರವಿರಲಿ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಅನಧಿಕೃತ ಸಾಲದ ಆ್ಯಪ್‌ಗಳಿಂದ ಸುರಕ್ಷಿತವಾಗಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಮುಖ್ಯವಾಗಿದೆ. ಬೆಂಗಳೂರು ನಗರ ಪೊಲೀಸರು ಈ ಸಮಸ್ಯೆಗಳನ್ನು ಹತ್ತಿಕ್ಕಲು ಕ್ರಿಯಾಶೀಲವಾಗಿ ಕಾರ್ಯಪ್ರವೃತ್ತರಾಗಿದ್ದಾರೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಓಡಿಶಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ

“ಸಾರ್ವಜನಿಕರು ಈ ಕುರಿತಾಗಿ ಜಾಗರೂಕರಾಗಿರುವುದರ ಜತೆಗೆ ಇಂತಹ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಗಮನಕ್ಕೆ ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ವರದಿ ಮಾಡಬೇಕು” ಎಂದು ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...