ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ

Date:

ಪಬ್‌ವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಪಬ್‌ ಮ್ಯಾನೇಜರ್‌ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಕ್ಟೋಬರ್ 24ರ ರಾತ್ರಿ ಕೆಂಚನಹಳ್ಳಿ ರಸ್ತೆಯಲ್ಲಿರುವ ಐಡಿಯಲ್ ಹೋಮ್ಸ್ ಬಳಿಯ ಪಬ್​ವೊಂದರಲ್ಲಿ ಈ ಘಟನೆ ನಡೆದಿದೆ. ಪಬ್‌ ಮ್ಯಾನೇಜರ್ ರವಿಕಾಂತ್ ಎಂಬುವವರು ಆರ್​ ಆರ್ ನಗರ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

“ಶ್ರೇಯಸ್ ಹಾಗೂ ಆತನ ಸ್ನೇಹಿತರು ಅಕ್ಟೋಬರ್ 24 ರಂದು ರಾತ್ರಿ 10:45ರ ಸುಮಾರಿಗೆ ಐಡಿಯಲ್ ಹೋಮ್ಸ್ ಬಳಿಯ ಪಬ್​ಗೆ ಬಂದಿದ್ದರು. ಈ ವೇಳೆ, ಪಬ್​ನಲ್ಲಿ ಕನ್ನಡ‌ ಹಾಡು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕನ್ನಡ ಹಾಡು ಹಾಕಿದ್ದಕ್ಕೆ ಪಬ್‌ನ ಮ್ಯಾನೇಜರ್‌ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಜತೆಗೆ ಅವರ ಜೊತೆಯಲ್ಲಿಯೇ ಇದ್ದ ಮಹಿಳೆಯೊಬ್ಬರ ಸಹಾಯದಿಂದ ಪಬ್‌ನ ಮ್ಯಾನೇಜರ್ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 3 ದಿನಗಳ ನಂತರ ಬಲೆಗೆ ಬಿದ್ದ ಚಿರತೆ

ಪಬ್ ಮ್ಯಾನೇಜರ್ ರವಿಕಾಂತ್ ನೀಡಿದ ದೂರಿನ ಅನ್ವಯ ಶ್ರೇಯಸ್ ಹಾಗೂ ಆತನ ಸ್ನೇಹಿತನ ವಿರುದ್ಧ ಆರ್.ಆರ್.ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...