ಬೆಂಗಳೂರು | ರೈಲ್ವೆ ಮೇಲ್ಸೇತುವೆ ಕಾಮಗಾರಿ; ಆಗಸ್ಟ್‌ ವರೆಗೆ ಕೆ ಆರ್‌ ಪುರಂ ಮಾರ್ಗದಲ್ಲಿ ಸಂಚಾರ ದಟ್ಟಣೆ

Date:

ಬೆಂಗಳೂರಿನ ಬೆನ್ನಿಗಾನಹಳ್ಳಿ ಮೇಲ್ಸೇತುವೆಯಲ್ಲಿ ರೈಲ್ವೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ನಗರದ ಬೆನ್ನಿಗಾನಹಳ್ಳಿ ಮತ್ತು ಕೆ ಆರ್‌ ಪುರಂ ಮಾರ್ಗದಲ್ಲಿ ಆಗಸ್ಟ್‌ವರೆಗೆ ಸಂಚಾರ ದಟ್ಟಣೆ ಉಂಟಾಗಬಹುದು.

ನಗರದ ಕೆ ಆರ್‌ ಪುರಂ, ಮಹದೇವಪುರ ಹಾಗೂ ಮಾರತ್ತಹಳ್ಳಿಗೆ ನಿತ್ಯ ಸಂಚರಿಸುವ ವಾಹನ ಸವಾರರು ಇದರಿಂದ ಪರದಾಡುವ ಸಾಧ್ಯತೆ ಇದೆ.

ವಾಹನ ಸವಾರರು ಕಸ್ತೂರಿ ನಗರದಿಂದ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಕಡೆಗೆ ಎಡ ತಿರುವು ಪಡೆದು ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆ ಬಳಸಿ ಹಳೆ ಮದ್ರಾಸ್ ರಸ್ತೆಯಲ್ಲಿರುವ ಟಿನ್ ಫ್ಯಾಕ್ಟರಿ ಜಂಕ್ಷನ್‌ಗೆ ತೆರಳಬೇಕು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳೆ ಮದ್ರಾಸ್ ರಸ್ತೆ ಮೂಲಕ ನಗರದ ಕಡೆಯಿಂದ ಕೆ.ಆರ್.ಪುರದ ಕಡೆಗೆ ಸಂಚರಿಸುವ ವಾಹನಗಳನ್ನು ಹಳೇ ಮದ್ರಾಸ್ ರಸ್ತೆ ಸದಾನಂದ ನಗರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ಸದಾನಂದ ನಗರ ರಸ್ತೆ, ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಜಂಕ್ಷನ್, ಕಸ್ತೂರಿ ನಗರದ ಮುಖಾಂತರ ಹೊರ ವರ್ತುಲ ರಸ್ತೆಯ ಸರ್ವೀಸ್ ರಸ್ತೆ ಮೂಲಕ ಕೆ.ಆರ್.ಪುರದ ಕಡೆಗೆ ಸಂಚರಿಸಲು ಅನುವು ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆಬ್ಬಾಳ ಸರ್ವೀಸ್ ರಸ್ತೆಯಲ್ಲಿ ಮುಂದಿನ ವಾರ ಸಂಚಾರ ಆರಂಭ ಸಾಧ್ಯತೆ

ಹಳೇ ಮದ್ರಾಸ್ ರಸ್ತೆಯ ಬೆನ್ನಿಗಾನಹಳ್ಳಿ ಬಳಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದಿಂದ ಹೊಸೂರು ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮಾರ್ಗದ ಮೇಲ್ಸೇತುವೆ ವಿಸ್ತರಣೆ ಮತ್ತು ಆರ್.ಸಿ.ಸಿ ಬಾಕ್ಸ್ ಅಳವಡಿಕೆ ಕಾಮಗಾರಿ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...