ನವೆಂಬರ್ 5 ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Date:

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ ಐದರರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈ ಬಾರಿ ಮುಂಗಾರಿನಲ್ಲಿ ಮಳೆ ತುಂಬಾ ಕಡಿಮೆಯಾಗಿದೆ, ಹಲವು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ, ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಣಂಬೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಾರವಾರದಲ್ಲಿ 36.1ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 16.0ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...