ಬೆಂಗಳೂರು | ಅತ್ಯಾಚಾರ ಆರೋಪಿಯನ್ನು ದುಬೈನಲ್ಲಿ ಸೆರೆಹಿಡಿದ ಪೊಲೀಸರು

Date:

ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ವಿಚಾರಣೆಗೆ ಹಾಜರಾಗದೇ ದುಬೈಗೆ ಹೋಗಿ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳ ಸಹಾಯದಿಂದ ಬಂಧಿಸಲಾಗಿದೆ.

ಮಿಥುನ್ ಚಂದ್ರನ್ (31) ಬಂಧಿತ ಆರೋಪಿ. ಈತನ ಮೇಲೆ 2020ರಲ್ಲಿ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಬೆದರಿಕೆ ಸೇರಿದಂತೆ ನಾನಾ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜಾಮೀನು ತೆಗೆದುಕೊಂಡು ಹೊರಬಂದ ಆರೋಪಿ ವಿಚಾರಣೆಗೆ ಹಾಜರಾಗದೇ ಬೆಂಗಳೂರು ತೊರೆದು ದುಬೈಗೆ ತೆರಳಿ ಅಲ್ಲಿಯೇ ನೆಲೆಸಿದ್ದನು.

ವಿಚಾರಣೆಗೆ ದೀರ್ಘಾವಧಿ ಗೈರು ಹಾಜರಾದ ಹಿನ್ನೆಲೆ, ಆತನ ಮೇಲೆ ಎಸಿಎಂಎಂ ನ್ಯಾಯಾಲಯವು ಬಂಧನ ವಾರೆಂಟ್ ಜಾರಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಿಥುನ್ ಚಂದ್ರನ್ ಬಂಧನಕ್ಕೆ ಸಿದ್ಧರಾದ ಪೊಲೀಸರು ಆತ ದುಬೈನಲ್ಲಿ ನೆಲೆಸಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ. ಬಳಿಕ ಸಿಬಿಐ ಇಂಟರ್‌ಪೋಲ್ ಮೂಲಕ ಆತನ ಮೇಲೆ ರೆಡ್‌ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ.

ದುಬೈ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಸಿಬಿಐ ಇಂಟರ್‌ಪೋಲ್‌ ಅಧಿಕಾರಿಗಳ ವಶಕ್ಕೆ ನೀಡಿದ್ದರು. ಬಳಿಕ ಮಹದೇವಪುರ ಇನ್‌ಸ್ಪೆಕ್ಟರ್ ಪ್ರವೀಣ್ ಬಾಬು ನೇತೃತ್ವದ ತಂಡ ದುಬೈಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿಗೆ ಆರೋಪಿಯನ್ನು ಗುರುವಾರ ಕರೆದುಕೊಂಡು ಬಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎರಡಂತಸ್ತಿನ ಕಟ್ಟಡ ಜತೆಗೆ ಧರೆಗುರುಳಿದ ಮೊಬೈಲ್ ಟವರ್

ಏನಿದು ಪ್ರಕರಣ?

ಮಿಥುನ್ ಚಂದ್ರನ್ ಮೂಲತಃ ಕೇರಳದವನು. ಈತ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಯುವತಿಯ ಜತೆಗೆ ಸ್ನೇಹ ಬೆಳೆದಿದೆ. ಬಳಿಕ ಇಬ್ಬರು ಪ್ರೀತಿ ಮಾಡಲು ಆರಂಭಿಸಿದ್ದಾರೆ.

ಬಳಿಕ ಇಬ್ಬರು ಲಿವಿಂಗ್‌ ಟುಗೆದರ್ ನಲ್ಲಿ ನೆಲೆಸಿದ್ದರು. ಮಿಥುನ್ ಚಂದ್ರನ್ ಯುವತಿಯನ್ನು ಮದುವೆಯಾಗಲು ಹಿಂದೇಟು ಹಾಕಿದ್ದನು. ಕ್ರಮೇಣ ಇಬ್ಬರು ಜಗಳ ಮಾಡಿಕೊಂಡು ದೂರವಾಗಿದ್ದರು. ಇದರಿಂದ ಸಂತ್ರಸ್ತೆ 2020ರ ಫೆಬ್ರವರಿ 1 ರಂದು ಮಹದೇವಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣದಡಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಮಿಥುನ್ ಚಂದ್ರನ್‌ನನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...