ಬೆಂಗಳೂರು | ಸ್ನೇಹಿತನ ಜನ್ಮದಿನಾಂಕ ಹೇಳಲು ನಿರಾಕರಣೆ; ವಿದ್ಯಾರ್ಥಿ ಮೇಲೆ ಯುವತಿಯ ಗುಂಪಿನಿಂದ ಹಲ್ಲೆ

Date:

  • ಆರು ಜನರ ವಿರುದ್ಧ ಜೆಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ನಿನಗೆ ನಾನು ಯಾರೆಂದು ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಯುವತಿ

ಸ್ನೇಹಿತನ ಜನ್ಮದಿನಾಂಕ ಹೇಳಲು ನಿರಾಕರಿಸಿದವನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆಪಿ ನಗರ ಠಾಣಾ ವ್ಯಾಪ್ತಿಯ ಪ್ರೆಸಿಡೆನ್ಸಿ ಕಾಂಪೋಸಿಟ್ ಪಿಯು ಕಾಲೇಜು ಬಳಿ ನಡೆದಿದೆ.

ಮಹಮ್ಮದ್ ಅಜೀಮ್ ಪಾಷ ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆ ಮಾಡಿದ ಆರೋಪದಡಿ ಆತನ ಜ್ಯೂನಿಯರ್ ವಿದ್ಯಾರ್ಥಿ‌ನಿ, ಆಕೆಯ ಸಹೋದರ ಮತ್ತು ಆತನ ಸ್ನೇಹಿತರು ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಮ್ಮದ್ ಅಜೀಮ್ ಪಾಷ ಎಂಬ ವಿದ್ಯಾರ್ಥಿ ಬೆಂಗಳೂರಿನ ಪ್ರೆಸಿಡೆನ್ಸಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾನೆ. ಇತ್ತೀಚೆಗೆ ಈತನಿಗೆ ಪರಿಚಯ ಇರುವ ಮಹಮ್ಮದ್ ಉಬೇದ್ ಉಲಾ ಎಂಬುವರು ಅದೇ ಕಾಲೇಜಿಗೆ ಪ್ರಥಮ ಪಿಯುಸಿಗೆ ಪ್ರವೇಶ ಪಡೆದಿದ್ದರು.

ಜುಲೈ 22ರಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸಿನಿಯರ್ಸ್​​​ ವೆಲ್ ಕಮ್ ಡೇ ಏರ್ಪಡಿಸಿದ್ದರು. ಈ ದಿನ ಮಹಮ್ಮದ್ ಅಜೀಮ್ ಪಾಷ ಅವರಿಗೆ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ಓರ್ವ ವಿದ್ಯಾರ್ಥಿನಿ ಪರಿಚಯವಾಗಿದ್ದಾಳೆ.

ಜುಲೈ 24ರಂದು ಅಜೀಮ್ ಪಾಷಾ ಅವರನ್ನು ಯುವತಿ ಹೊರಗಡೆ ಕರೆದುಕೊಂಡು ಹೋಗಿ ನಿನ್ನ ಸ್ನೇಹಿತ ಮಹಮ್ಮದ್ ಉಬೇದ್ ಉಲಾ ಅವರ ಜನ್ಮದಿನಾಂಕ ತಿಳಿಸುವಂತೆ ಕೇಳಿದ್ದಾಳೆ. ಈ ವೇಳೆ, ಮಹಮ್ಮದ್ ಅಜೀಮ್ ಪಾಷಾ ತನಗೆ ಈ ಬಗ್ಗೆ ಮಾಹಿತಿ ಇಲ್ಲವೆಂದು ಹೇಳಿದ್ದಾನೆ.

ಮರುದಿನ ಜು.25 ರಂದು ಮಧ್ಯಾಹ್ನ ಕಾಲೇಜಿನಲ್ಲಿ ವಿಶ್ರಾಂತಿ ಸಮಯಕ್ಕೆ ಬಿಟ್ಟಾಗ ವಿದ್ಯಾರ್ಥಿನಿ ಮಹಮ್ಮದ್ ಉಬೇದ್ ಉಲಾ ಜನ್ಮ ದಿನಾಂಕವನ್ನು ನೀಡಲಿಲ್ಲ, ನಿನಗೆ ನಾನು ಯಾರೆಂದು ತೋರಿಸುತ್ತೇನೆ ಎಂದು ಮಹಮ್ಮದ್ ಅಜೀಮ್ ಪಾಷಗೆ ಬೆದರಿಕೆ ಹಾಕಿದ್ದಾಳೆ.

ಮಾರನೇ ದಿನ ಯುವತಿ ಝನ್ ಮತ್ತು ಶೇಕ್ ಸೇರಿದಂತೆ ಐವರನ್ನು ಕಾಲೇಜು ಬಳಿ ಕರೆಸಿ ಮಹಮ್ಮದ್ ಅಜೀಮ್ ಪಾಷಾ ಅವರನ್ನು ಕಾಲೇಜಿನಿಂದ ಬಲವಂತವಾಗಿ ಕಾಕ್ ಮ್ಯಾಜಿಕ್ ಬಳಿಗೆ ಕರೆದುಕೊಂಡು ಹೋಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೋಟೆಲ್ ದರ ಏರಿಕೆ ವಿರುದ್ಧ ವಾಟಾಳ್ ನಾಗರಾಜ್ ಮುದ್ದೆ ಪ್ರತಿಭಟನೆ

ನಂತರ ಜಯನಗರ 4ನೇ ಟಿ ಬ್ಲಾಕ್ ನಲ್ಲಿರುವ ಬಿ.ಇ.ಎಸ್ ಕಾಲೇಜಿನ ಬಳಿ ಕರೆದುಕೊಂಡು ಹೋಗಿ ಇನ್ನಷ್ಟು ಥಳಿಸಿ, ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿ ಹೋಗಿದ್ದಾರೆ ಎಂದು ಮಹಮ್ಮದ್ ಅಜೀಮ್ ಪಾಷ ದೂರಿನಲ್ಲಿ ದಾಖಲಿಸಿದ್ದಾರೆ.

ಸದ್ಯ ಘಟನೆ ಸಂಬಂಧ ಗಾಯಾಳು ವಿದ್ಯಾರ್ಥಿ ನೀಡಿರುವ ದೂರಿನನ್ವಯ ಜೆ.ಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...