ಬೆಂಗಳೂರು | ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ನಿವಾಸಿಗಳು : ಎಫ್‌ಐಆರ್‌ ದಾಖಲು

Date:

  • ಬುಧವಾರ ಬೆಳಗ್ಗೆಯಿಂದ ಜ್ವರ ಹಾಗೂ ವಾಂತಿ–ಭೇದಿಯಿಂದ ಬಳಲಿದ ಮಕ್ಕಳು
  • 140 ಜನರನ್ನು ಮತ್ತೆ ಪರೀಕ್ಷೆ ಮಾಡಿದಾಗ 40 ಜನರಲ್ಲಿ ವಾಂತಿ ಭೇದಿ ಪ್ರಕರಣ ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಸಮೀಪದ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್‌ನ ಸಮುಚ್ಚಯದಲ್ಲಿ ಸುಮಾರು 118 ನಿವಾಸಿಗಳು ಕಲುಷಿತ ನೀರು ಸೇವಿಸಿ ‘ಗ್ಯಾಸ್ಟ್ರೋಎಂಟರೈಟಿಸ್‌’ನಿಂದ ಬಳಲುತ್ತಿದ್ದಾರೆ. ಈ ಪೈಕಿ 79 ಮಕ್ಕಳು ಅಸ್ವಸ್ಥಗೊಂಡಿದ್ದು, 2 ಮಕ್ಕಳ ಸ್ಥಿತಿ ಗಂಭೀರವಾಗಿದೆ.

ಕುಡಿಯುವ ನೀರಿನ ಟ್ಯಾಂಕ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿ ಜನರ ಜೀವಕ್ಕೆ ಕುತ್ತು ತಂದ ಆರೋಪದಡಿ ಅಪಾರ್ಟ್‌ಮೆಂಟ್‌ ಸಮುಚ್ಚಯ ನಿರ್ಮಿಸಿದ್ದ ಕಂಪನಿ ಹಾಗೂ ಇತರರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬಿಬಿಎಂಪಿ ಆರೋಗ್ಯಾಧಿಕಾರಿ ಬಾಲಸುಂದರ್, “ಕಲುಷಿತ ನೀರು ಕುಡಿದು 118 ನಿವಾಸಿಗಳು ಅಸ್ವಸ್ಥಗೊಂಡಿದ್ದರು. ಇದರಲ್ಲಿ 79 ಮಕ್ಕಳಿದ್ದಾರೆ. ಈ ಪೈಕಿ 2 ಮಕ್ಕಳು ಅಡ್ಮಿಟ್‌ ಆಗಿದ್ದರು. ಅವರು ಕೂಡ ಇಂದು ಡಿಸ್ಚಾರ್ಜ್‌ ಆಗುತ್ತಿದ್ದಾರೆ. ಪ್ರತಿಯೊಂದು ಫ್ಲಾಟ್‌ಗೂ ಕೂಡ ನಮ್ಮ ವೈದ್ಯರ ತಂಡ ತೆರಳಿ ಚಿಕಿತ್ಸೆ ನೀಡುತ್ತಿದೆ. ಈ ವೇಳೆ, 140 ಜನರನ್ನು ಮತ್ತೆ ಪರೀಕ್ಷೆ ಮಾಡಿದಾಗ 35 ರಿಂದ 40 ಜನಕ್ಕೆ ವಾಂತಿ ಭೇದಿ ಪ್ರಕರಣ ಕಂಡುಬಂದಿದೆ. ಅವರಿಗೆ ಔಷಧಿ ಕೊಟ್ಟಿದ್ದೇವೆ. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಪಾರ್ಟ್‌ಮೆಂಟ್‌ಗೆ ಖಾಸಗಿ ಟ್ಯಾಂಕರ್‌ಗಳ ಜೊತೆಗೆ ನಾಲ್ಕು ಬೋರ್‌ವೆಲ್‌ಗಳ ನೀರು ಬಳಸಲಾಗುತ್ತಿದೆ. ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ಜೂನ್ 5ರಂದು ಖಾಸಗಿ ಟ್ಯಾಂಕರ್‌ನಿಂದ ನೀರು ಖರೀದಿಸಿತು. ನಂತರ ಎಂಟು ಬ್ಲಾಕ್‌ಗಳ ಪೈಕಿ ಎರಡರಲ್ಲಿ ನಿವಾಸಿಗಳು ಅತಿಸಾರ ಮತ್ತು ವಾಂತಿಯಂತಹ ರೋಗಲಕ್ಷಣಗಳನ್ನು ಅನುಭವಿಸಿದರು. ಅಪಾರ್ಟ್‌ಮೆಂಟ್ ಇನ್ನೂ ನಿರ್ಮಾಣ ಹಂತದಲ್ಲಿದ್ದು, ಸೌಲಭ್ಯ ಕಲ್ಪಿಸುವ ಬಗ್ಗೆ ಬಿಲ್ಡರ್ ಮತ್ತು ಅಪಾರ್ಟ್‌ಮೆಂಟ್ ಮಾಲೀಕರ ನಡುವೆ ವಿವಾದಗಳಿವೆ” ಎಂದು ಬಾಲಸುಂದರ್ ತಿಳಿಸಿದರು.

“ಬಾಧಿತರಾದವರಲ್ಲಿ ಹೆಚ್ಚಿನವರು ಮಕ್ಕಳು. ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದ್ದು, ರೋಗಲಕ್ಷಣಗಳೊಂದಿಗೆ ಕ್ಲಿನಿಕ್‌ಗೆ ಬಂದವರಿಗೆ ಚಿಕಿತ್ಸೆ ನೀಡಲಾಗಿದೆ. ಬಿಬಿಎಂಪಿಯು ಅಪಾರ್ಟ್‌ಮೆಂಟ್‌ನ ನೀರಿನ ತೊಟ್ಟಿಯನ್ನು ಬ್ಲೀಚ್ ಮಾಡಿ ಕ್ಲೋರಿನೇಟ್ ಮಾಡಿದ್ದು, ಸದ್ಯಕ್ಕೆ ಹೊರಗಿನಿಂದ ನೀರು ಪೂರೈಕೆಗೆ ವ್ಯವಸ್ಥೆ ಮಾಡಿದೆ” ಎಂದು ಹೇಳಿದರು.

“ಸುಮಾರು ಮೂರು ವರ್ಷಗಳಿಂದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿಲ್ಲ ಎಂದು ಆರೋಪಿಸಿ ಬಿಬಿಎಂಪಿ ಬಿಲ್ಡರ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಐಪಿಸಿ ಸೆಕ್ಷನ್‌ 277, 338 ಅಡಿ ಎಫ್‌ಐಆರ್‌ ದಾಖಲಾಗಿದೆ. ಅಪಾರ್ಟ್‌ಮೆಂಟ್‌ ಸಮುಚ್ಚಯ ನಿರ್ಮಿಸಿದ್ದ ಕಂಪನಿ ಹಾಗೂ ಇತರರಿಗೆ ನೋಟಿಸ್‌ ನೀಡಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರ ಕಡಿಯಲು ಅನುಮತಿ ನೀಡಿದ ಹೈಕೋರ್ಟ್‌

“ಕುಡಿಯುವ ನೀರು ಪೂರೈಸಲು ದೊಡ್ಡ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದೆ. ಎಲ್ಲ ಫ್ಲ್ಯಾಟ್‌ಗಳಿಗೆ ಟ್ಯಾಂಕ್‌ಗಳಿಂದ ಕುಡಿಯುವ ನೀರು ಸರಬರಾಜು ಆಗುತ್ತದೆ. ಆದರೆ, ಮೂರು ವರ್ಷಗಳಿಂದ ಟ್ಯಾಂಕ್ ಸ್ವಚ್ಛಗೊಳಿಸಿಲ್ಲ. ನಿರ್ವಹಣೆ ಕೊರತೆಯಿಂದಾಗಿ ನೀರು ಕಲುಷಿತಗೊಂಡಿದೆ. ಅದೇ ನೀರು ಕುಡಿದ ಮಕ್ಕಳು, ಬುಧವಾರ ಬೆಳಗ್ಗೆಯಿಂದ ಜ್ವರ ಹಾಗೂ ವಾಂತಿ–ಭೇದಿಯಿಂದ ಬಳಲುತ್ತಿದ್ದಾರೆ” ಎಂದು ಪೊಲೀಸರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...