ಬೆಂಗಳೂರು | ವಿವಿ ಪುರಂನ ‘ತಿಂಡಿ ಬೀದಿ’ ರಸ್ತೆ ಅಭಿವೃದ್ಧಿ

Date:

  • ರಸ್ತೆಯ ಮೆಲ್ಭಾಗಕ್ಕೆ 3 ಎಂ.ಎಂನ ಕೆಂಗಂದು ಬಣ್ಣ ಪಾಲೀಶ್: ಬಿಬಿಎಂಪಿ ವಿಶೇಷ ಆಯುಕ್ತ
  • ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಕುಸಿದ ದೇವಸ್ಥಾನದ ಗೋಡೆ

ಬೆಂಗಳೂರಿನ ವಿವಿ ಪುರಂನ ತಿಂಡಿ ಬೀದಿಯಲ್ಲಿ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯ ಅಭಿವೃದ್ಧಿಯ ಕಾರ್ಯ ನಡೆಯುತ್ತಿದೆ” ಎಂದು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಹೇಳಿದರು.

ವಿವಿಪುರಂ ವಾರ್ಡ್‌ನಲ್ಲಿ ಬರುವ ಫುಡ್ ಸ್ಟ್ರೀಟ್(ತಿಂಡಿ ಬೀದಿ) ಹಾಗೂ ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಬರುವ ಗಂಗಾಧರೇಶ್ವರ ದೇವಸ್ಥಾನ ಗೋಡೆ ಕುಸಿದಿರುವ ಸ್ಥಳಕ್ಕೆ ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ರವರು ತೆರಳಿ ಪರಿಶೀಲನೆ ನಡೆಸಿದರು.

“ಬೆಂಗಳೂರಿನ ವಿವಿ ಪುರಂನಲ್ಲಿರುವ ತಿಂಡಿ ಬೀದಿಯ ಅಭಿವೃದ್ಧಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ರಸ್ತೆಗೆ ಅನುಗುಣವಾಗಿ ಬೆಡ್ ಕಾಂಕ್ರಿಟ್ ಹಾಕಿ 5 ಮೀಟರ್ ಕಾಂಕ್ರೀಟ್ ರಸ್ತೆಯ ಕೆಲಸ ಪ್ರಗತಿಯಲ್ಲಿದ್ದು, ಎರಡೂ ಬದಿ 3 ಮೀಟರ್ ಪಾದಚಾರಿ ಮಾರ್ಗ, 25 ವಿದ್ಯುತ್ ದೀಪಗಳ ಅಳವಡಿಕೆ ಕೆಲಸ ಸೇರಿದಂತೆ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ಇನ್ನೂ ಕೆಲವು ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಈಗಾಗಲೇ ಒಳಚರಂಡಿ ಸಂಪರ್ಕ, ನೀರು ಸರಬರಾಜು ಸಂಪರ್ಕ, ಮಳೆನೀರುಗಾಲುವೆ ಸಂಪರ್ಕ, ಕೇಬಲ್‌ಗಳ ಲೈನ್ ಡಕ್ಟ್ ಹಾಗೂ ಕೇಬಲ್ ಚೇಂಬರ್‌ಗೆ ಸಂಬಂಧಿಸಿದ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಕ್ರೀಟ್ ರಸ್ತೆಗೆ ಕೆಂಗಂದು ಬಣ್ಣ ಅಳವಡಿಕೆ

“ಫುಡ್ ಸ್ಟ್ರೀಟ್ ನ 200 ಮೀಟರ್ ಉದ್ದದ ರಸ್ತೆಯಲ್ಲಿ ನಿರ್ಮಿಸುತ್ತಿರುವ 5 ಮೀಟರ್ ಅಗಲದ ಕಾಂಕ್ರೀಟ್ ರಸ್ತೆಯ ಮೆಲ್ಭಾಗಕ್ಕೆ 3 ಎಂ.ಎಂನ ಕೆಂಗಂದು ಬಣ್ಣ ಹಾಕಲಾಗುತ್ತಿದೆ. ಶೇ. 70 ರಷ್ಟು ಕಾಂಕ್ರೀಟ್ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದು, ಸಂಪೂರ್ಣ ಕಾಂಕ್ರೀಟ್ ರಸ್ತೆ ಪೂರ್ಣಗೊಂಡ ಬಳಿಕ ರಸ್ತೆಗೆ ಕೆಂಗಂದು ಬಣ್ಣದ ಪಾಲೀಶ್ ಮಾಡಲಾಗುತ್ತದೆ. ಇದರಿಂದ ರಸ್ತೆ ಆಕರ್ಷಕವಾಗಿ ಕಾಣಲಿದೆ” ಎಂದು ತಿಳಿಸಿದರು.

ಗಂಗಾಧರೇಶ್ವರ ದೇವಸ್ಥಾನದ ಗೋಡೆ ದುರಸ್ತಿ ಕಾರ್ಯ

ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯ ಬಳಿಯ ಗಂಗಾಧರೇಶ್ವರ ದೇವಸ್ಥಾನ ಬಳಿ ಆಗಸ್ಟ್ 1ರಂದು ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಚರಣೆಯ ವೇಳೆ ದೇವಾವಲಯದ ಮೇಲ್ಭಾಗದ ಗೋಡೆ ಕುಸಿದು ಬಿದ್ದಿದ್ದು, ಪಾಲಿಕೆ ವತಿಯಿಂದ ಗೋಡೆಯ ದುರಸ್ಥಿ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಜುಲೈನಲ್ಲಿ ವಾಡಿಕೆಗಿಂತ ಶೇ.3ರಷ್ಟು ಹೆಚ್ಚು ಮಳೆ

“ಗಂಗಾಧರೇಶ್ವರ ದೇವಸ್ಥಾನವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರಲಿದ್ದು, ದೇವಾಲಯಕ್ಕೆ ಹೊಂದಿಕೊಂಡಂತಿರುವ ಅಂಗಡಿಯ ಮೇಲ್ಭಾಗದ ಗೋಡೆಗೆ ಅಂಗಡಿಯ ನಾಮಫಲಕ ಹಾಗೂ ಶೀಟ್ ಅನ್ನು ಅಳವಡಿಸಲಾಗಿತ್ತು. ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಜೆಸಿಬಿಯ ಮೂಲಕ ನಾಮಫಲಕ ಹಾಗೂ ಶೀಟ್ ಅನ್ನು ತೆರವುಗೊಳಿಸುವ ಸಮಯದಲ್ಲಿ ದೇವಾಲದ ಮೇಲ್ಭಾಗದ ಗೋಡೆ ತುಂಬಾ ಹಳೆಯದಾಗಿದ್ದ ಕಾರಣ ಗೋಡೆ ಕುಸಿದು ಬಿದ್ದಿದೆ. ಈ ಸಂಬಂಧ ಈಗಾಗಲೇ ಪಾಲಿಕೆ ವತಿಯಿಂದ ಗೋಡೆಯ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಈ ವೇಳೆ ವಲಯ ಮುಖ್ಯ ಅಭಿಯಂತರರಾದ ರಾಜೇಶ್, ಕಾರ್ಯಪಾಲಕ ಅಭಿಯಂತರರಾದ ಮಹಂತೇಶ್, ಯರಪ್ಪ ರೆಡ್ಡಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...