ಬೆಂಗಳೂರು | ರೌಡಿಶೀಟರ್ ಸಹದೇವ ಹತ್ಯೆ ಪ್ರಕರಣ: ಎಂಟು ಮಂದಿ ಬಂಧನ

Date:

ಬೇಕರಿ ಬಳಿ ಟೀ ಕುಡಿಯಲು ತೆರಳಿದ್ದ ರೌಡಿಶೀಟರ್‌ ಸಹದೇವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ಯ ಪುಟ್ಟೇನಹಳ್ಳಿ ಪೊಲೀಸರು ವಿನಯ್, ಧರ್ಮ ಎಂಬುವರು ಸೇರಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ 9.30ರ ಸುಮಾರಿಗೆ ಆರು ದುಷ್ಕರ್ಮಿಗಳು ರೌಡಿಶೀಟರ್ ಸಹದೇವನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಹದೇವ್​ ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾನೆ. ಈ ವೇಳೆ, ರೌಡಿಶೀಟರ್‌ ಸಹದೇವನನ್ನು ಟಾರ್ಗೆಟ್ ಮಾಡಿದ್ದ ಆರು ದುಷ್ಕರ್ಮಿಗಳು ಮೂರು ಬೈಕ್​ಗಳಲ್ಲಿ ಬಂದು ಸಹದೇವ್ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ಬಿಡುವ ವಿಚಾರಕ್ಕೆ ರೌಡಿಶೀಟರ್ ಸಹದೇವ್, ರಾಬರಿ ನವೀನ್ ಮತ್ತು ವಿನಯ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆರೋಪಿ ವಿನಯ್ ಮತ್ತು ಆತನ ತಮ್ಮನ ಮೇಲೆ ಸಹದೇವ ಮತ್ತು ರಾಬರಿ ನವೀನ್ ಹಲ್ಲೆ ಮಾಡಿದ್ದರು. ಈ ವೇಳೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿತ್ತು. ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಸಹದೇವ ಬೇಕರಿ ಬಳಿ ಟೀ ಕುಡಿಯಲು ತೆರಳಿದಾಗ ಅಲ್ಲಿಯೇ ಇದ್ದ ವಿನಯ್ ಗ್ಯಾಂಗ್ ಮತ್ತು ಸಹದೇವ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ಆರಂಭವಾಗಿದೆ. ವಿನಯ್ ಗ್ಯಾಂಗ್ ಸಹದೇವನೊಂದಿಗೆ ನವೀನ್ ಬಗ್ಗೆ ವಿಚಾರಿಸಿದೆ. ಯಾಕೆ ಅವತ್ತು ಕೊಟ್ಟಿದ್ದು ಸಾಕಾಗಿಲ್ವಾ ಎಂದು ಸಹದೇವ ಹೇಳಿದ್ದಾನೆ. ಇದರಿಂದ ಕೋಪಗೊಂಡ ಆರೋಪಿಗಳು ಏಕಾಏಕಿ ಸಹದೇವನ ಮೇಲೆ ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಮೂರು ದ್ವಿಚಕ್ರ ವಾಹನಗಳಲ್ಲಿ ವಿನಯ್‌ ಗ್ಯಾಂಗ್ ಬಂದಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪುಟ್ಟೇನಹಳ್ಳಿ ಪೊಲೀಸರು ಸದ್ಯಕ್ಕೆ ಆರೋಪಿಗಳಾದ ವಿನಯ್, ಧರ್ಮ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳ ಹೆಚ್ಚಿನ ವಿಚಾರಣೆ ಮುಂದುವರೆಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...