ಬೆಂಗಳೂರು | ಅಂಗಾಂಗ ಸ್ಪರ್ಶಿಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಾಲೆಯ ಕಾಮುಕ ಮಾಲೀಕನ ಬಂಧನ

Date:

ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಟೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗ ಮುಟ್ಟಿ, ವಿಕೃತವಾಗಿ ವರ್ಣಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಶಾಲೆಯ ಕಾಮುಕ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯಲ್ಲಿರುವ ವಿಭಾ ಇಂಟರ್‌ನ್ಯಾಷನಲ್ ಸ್ಕೂಲ್‌ನ ಮಾಲೀಕ ಈರತ್ತಯ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರು ಆತನ ವಿರುದ್ಧ ದೂರು ನೀಡಿದ್ದು, ಆತನ ವಿಕೃತಿಯನ್ನು ಬಿಚ್ಚಿಟ್ಟಿದ್ದಾರೆ. ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ.

ಆರೋಪಿ ಈರತ್ತಯ್ಯ ತನ್ನ ಕ್ಯಾಬಿನ್‌ಗೆ ವಿದ್ಯಾರ್ಥಿನಿಯರನ್ನು ಕರೆಸಿಕೊಳ್ಳುತ್ತಿದ್ದರು. ಅವರ ಖಾಸಗಿ ಅಂಗಗಳನ್ನು ಸ್ಪರ್ಶಿಸಿ, ವಿಕೃತವಾಗಿ ನಡೆದುಕೊಳ್ಳುತ್ತಿದ್ದರು. ಅಲ್ಲದೆ, ವಿದ್ಯಾರ್ಥಿನಿಯರ ಅಂಗಗಳನ್ನು ಅಸಹ್ಯವಾಗಿ ಹಣ್ಣುಗಳಿಗೆ ಹೋಲಿಕೆ ಮಾಡುತ್ತಿದ್ದ ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ನೀಡಿರುವ ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿ ತನಗೆ ಈರತ್ತಯ್ಯ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ ವಿವರಿಸಿದ್ದಾರೆ. “ಕಾಮುಕ ಈರತ್ತಯ್ಯ ಆತನ ಕ್ಯಾಬಿನ್‌ಗೆ ನನ್ನನ್ನು ಕರೆಸಿಕೊಂಡು, ಮುತ್ತು ಕೊಟ್ಟಿದ್ದಾನೆ. ಋತುಚಕ್ರ (ಮುಟ್ಟು) ಹಾಗೂ ದೇಹದ ಅಂಗಾಂಗಗಳ ಬಗ್ಗೆ ಅಸಹ್ಯವಾಗಿ ಮಾತನಾಡಿದ್ದಾನೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ, ಶೈಕ್ಷಣಿಕ ಭವಿಷ್ಯವನ್ನೇ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...