ಬೆಂಗಳೂರು | ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ಆರೋಪ

Date:

ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರ ನಡುವೆಯೇ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕಿರುಕುಳಕ್ಕೆ ಒಳಗಾದ ಯುವತಿಯ ಸ್ನೇಹಿತರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಕಾಲೇಜಿಗೆ ತೆರಳಲು ಯುವತಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಳು. ಮೆಟ್ರೋ ಹತ್ತುವಾಗ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿ ಹಿಂದಿನಿಂದ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಮೊದಲಿಗೆ ಆತನ ಅಸಭ್ಯ ವರ್ತನೆ ಯುವತಿಯ ಅರಿವಿಗೆ ಬಂದಿಲ್ಲ. ಪದೇ-ಪದೇ ಅದೇ ರೀತಿ ನಡೆಯುತ್ತಿದ್ದರಿಂದ ಆಕೆಗೆ ಆತನ ವರ್ತನೆ ಅರಿವಾಗಿದೆ. ಬಳಿಕ ಆಕೆ ಸಹಪ್ರಯಾಣಿಕರಿಗೆ ಆ ಬಗ್ಗೆ ತಿಳಿಸಿದರೂ ಯಾರು ಆಕೆಯ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಕ್ಕೆ ಸಂಬಂಧಿಸಿದ್ದಂತೆ ಪ್ರತಿಕ್ರಿಯೆ ನೀಡಿರುವ ಬಿಎಂಆರ್‌ಸಿಎಲ್‌ ಅಧಿಕಾರಿಗಳು, “ಸೋಮವಾರ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ನೀಡಿಲ್ಲ. ಯಾರಾದರೂ ದೂರು ನೀಡಿದರೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...