ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

Date:

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ ಕಳ್ಳತನವಾಗಿರುವ ಘಟನೆ ಬೆಂಗಳೂರಿನ ನ್ಯಾಯಾಂಗ ಬಡಾವಣೆಯಲ್ಲಿ ನಡೆದಿದೆ.

“ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪುನೀತ್ ಎಳನೀರು ಕಳೆದುಕೊಂಡ ವ್ಯಾಪಾರಿ. ಇವರು ನ್ಯಾಯಾಂಗ ಬಡಾವಣೆಯಲ್ಲಿ ಸುಮಾರು 12 ವರ್ಷಗಳಿಂದ ಎಳನೀರು ವ್ಯಾಪಾರ ಮಾಡುತ್ತಿದ್ದಾರೆ. ಇವರ ತಾಯಿ ಮಧುಮೇಹ ಮತ್ತು ಗ್ಯಾಂಗ್ರಿನ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರ ಜತೆಗೆ ಅವರು ಮನೆ ಕೆಲಸ ಸಹ ಮಾಡಬೇಕು. ಇವರ ಕುಟುಂಬ ಈಗ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಇದರ ಜತೆಗೆ ಇದೀಗ ಎಳನೀರು ಕಳ್ಳತನವಾಗಿರುವುದು ಅವರಿಗೆ ಬರಸಿಡಿಲು ಬಡಿದಂತಾಗಿದೆ” ಎಂದು ಸಾಮಾಜಿಕ ಹೋರಾಟಗಾರ ಹೆಚ್ ಎಂ ವೆಂಕಟೇಶ್ ಹೇಳಿದ್ದಾರೆ.

“ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಗೆ ಸಂತ್ರಸ್ತ ಪುನೀತ್ ಅವರು ದೂರು ನೀಡಿದ್ದಾರೆ. ಆದರೆ, ಈ ಕೃತ್ಯ ನಡೆದು ಒಂದು ವಾರ ಕಳೆದರೂ ಕಳ್ಳರ ಬಗ್ಗೆ ಇನ್ನು ಸುಳಿವು ಸಿಕ್ಕಿಲ್ಲ. ಇತ್ತೀಚೆಗೆ ಪೊಲೀಸರು ನ್ಯಾಯಾಂಗ ಬಡಾವಣೆಯ 8ನೇ ಅಡ್ಡರಸ್ತೆ ಮತ್ತು 3ನೇ ಅಡ್ಡರಸ್ತೆ ಸೇರುವ ವೃತ್ತದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಆದರೂ ಈ ಕೃತ್ಯ ಬಯಲಿಗೆಳೆಯುವುದು ಪೊಲೀಸರಿಗೆ ಸವಾಲು ಎಸೆಯುವಂತೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

“ಇನ್ನು ಸಂತ್ರಸ್ತ ಪುನೀತ್ ಎಳನೀರು ಕಳೆದುಕೊಂಡು ಆರ್ಥಿಕ ಮುಗ್ಗಟ್ಟಿನಲ್ಲಿ ಬಿದ್ದಿದ್ದಾನೆ. ಪುನೀತ್ ಪಕ್ಕದ ಮನೆಯವರು ಹಾಕಿದ ಸಿಸಿ ಕ್ಯಾಮೆರಾದ ಫುಟೇಜ್‌ಗಳನ್ನು ಪೆನ್ ಡ್ರೈವ್‌ನಲ್ಲಿ ಹಾಕಿ ಪೊಲೀಸರಿಗೆ ಕೊಟ್ಟಿದ್ದಾರೆ. ಆದರೆ, ಪೊಲೀಸರು ಸಂತ್ರಸ್ತನಿಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಇತ್ತ ಜೀವನ ನಿರ್ವಹಣೆಯ ನಡುವೆ ಪೊಲೀಸ್ ಠಾಣೆಗೆ ಪದೇಪದೇ ಅಲೆದು ಸುಸ್ತಾಗಿದ್ದೇನೆ ಎಂದು ಸಂತ್ರಸ್ತ ಹೇಳಿದ್ದಾನೆ ಎಂದು ಹೇಳಿದರು.

ನಗರ ಪೊಲೀಸ್ ಆಯುಕ್ತರು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಬಡ ಕುಟುಂಬಕ್ಕೆ ಸಹಾಯ ಮಾಡುತ್ತಾರೆ ಎಂಬ ಭರವಸೆ ಇದೆ ಎಂಬುದು ಸಾಮಾಜಿಕ ಹೋರಾಟಗಾರ ಹೆಚ್ ಎಂ ವೆಂಕಟೇಶ್ ಅವರ ಅಭಿಪ್ರಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...