ಬೆಂಗಳೂರು | ರಾಜ್ಯದ ಎಲ್ಲ ಬಡವರಿಗೆ ಭೂಮಿ ದೊರೆಯದೆ ಹೋರಾಟ ನಿಲ್ಲದು: ಕುಮಾರ್ ಸಮತಳ

Date:

  • ಕಾಂಗ್ರೆಸ್‌ ಸರ್ಕಾರ ಜನಪರವಾಗಿ ಕೆಲಸ ಮಾಡಬೇಕು
  • ಹಿಂದಿನ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ, ಜನ ವಿರೋಧಿ ಸರ್ಕಾರ

“ಬಡವರು, ಭೂಮಿ ಮತ್ತು ಹಕ್ಕು ವಂಚಿತರು. ತಮ್ಮ‌ ಹಕ್ಕುಗಳಿಗಾಗಿ ಕಳೆದ 40-50 ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಯಾವ ಸರ್ಕಾರಗಳು ಅವರ ಹಕ್ಕುಗಳನ್ನು ಒದಗಿಸಲು ಮುಂದಾಗಿಲ್ಲ. ಇದು ನಿರ್ಣಾಯಕ ಹೋರಾಟವಾಗಿದೆ. ರಾಜ್ಯದ ಎಲ್ಲ ಬಡವರಿಗೆ ಭೂಮಿ, ವಸತಿ ದೊರೆಯದೆ ಹೋರಾಟ ನಿಲ್ಲುವುದಿಲ್ಲ. ಹಕ್ಕುಗಳನ್ನು ಒದಗಿಸುವುದಾಗಿ ಸರ್ಕಾರ ಭರವಸೆ ನೀಡಬೇಕು” ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನದ ಮುಂಚೆ ಬೆಂಗಳೂರಿನಲ್ಲಿ ಹೋರಾಟ ಸಮಿತಿ ನಡೆಸುತ್ತಿರುವ ಬಡವರ ‘ಬರಿಹೊಟ್ಟೆ ಸತ್ಯಾಗ್ರಹ’ದಲ್ಲಿ ಅವರು ಮಾತನಾಡಿದರು. “ಭೂವಂಚಿತರ ಹಕ್ಕುಗಳಿಗಾಗಿ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ‌ ಫ್ರೀಡಂ ಪಾರ್ಕ್‌ನಲ್ಲಿ 18 ದಿನಗಳ ಕಾಲ ಹೋರಾಟ ನಡೆಸಿದ್ದೇವೆ. ಬೆಳಗಾವಿ ಅಧಿವೇಶನದ ವೇಳೆಯೂ ಸತ್ಯಾಗ್ರಹ ನಡೆಸಿದ್ದೇವೆ. ಆದರೆ, ಸರ್ಕಾರಗಳು ಆಶ್ವಾಸನೆಗಳನ್ನಷ್ಟೇ ನೀಡಿ, ಜವಾಬ್ದಾರಿಯಿಂದ ನುಣುಚಿಕೊಂಡಿವೆ” ಎಂದು ಕಿಡಿಕಾರಿದರು.

“40-50 ವರ್ಷಗಳಿಂದ ಭೂಮಿ, ವಸತಿ ವಂಚಿತರಿ ಹೋರಾಟ ನಡೆಸುತ್ತಿದ್ದಾರೆ. ಅಂದಿನಿಂದಲೂ ಜನರು ಹಕ್ಕಿಗಾಗಿ ಕಾಯುತ್ತಿದ್ದಾರೆ. ಅದರೂ, ಯಾವ ಸರ್ಕಾರಗಳೂ ಅವರಿಗೆ ಭೂಮಿ ಹಕ್ಕು ಕೊಟ್ಟಿಲ್ಲ. ನಾವು ನಿರ್ಣಾಯಕ ಹೋರಾಟ ಮಾಡಬೇಕು. ಇಂದು ನಮ್ಮ ಬೇಡಿಕೆ ಈಡೇರದಿದ್ದರೆ, ನಾಳೆ (ಆಗಸ್ಟ್ 15 – ಸ್ವಾತಂತ್ರ್ಯ ದಿನ) ಎಲ್ಲರೂ ಉಪವಾಸ ಸತ್ಯಾಗ್ರಹ ಮಾಡಬೇಕು. ಭೂಮಿ ಇಲ್ಲದೆ, ವಸತಿ ಇಲ್ಲದೆ ಹೇಗೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಿಸಲು ಸಾಧ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರಾಳ ಶನಿವಾರ | ರಾಜ್ಯದಲ್ಲಿ ಅಪಘಾತಗಳಿಂದ 37 ಸಾವು ; ಎಡಿಜಿಪಿ ಟ್ವೀಟ್

“ಹಿಂದಿನ ಸರ್ಕಾರ ಭ್ರಷ್ಟ ಸರ್ಕಾರ, ಜನ ವಿರೋಧಿ ಸರ್ಕಾರವೆಂದು ಸೋಲಿಸಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಸರ್ಕಾರ ಜನಪರವಾಗಿ ಕೆಲಸ ಮಾಡಬೇಕು. ಭೂಮಿ, ವಸತಿ ವಂಚಿತರಿಗೆ ಭೂಮಿ, ವಸತಿ ನೀಡಬೇಕು. ಅದಕ್ಕಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ಕರೆಯಬೇಕು” ಎಂದು ಒತ್ತಾಯಿಸಿದರು.

“ಉನ್ನತ ಮಟ್ಟದ ಸಭೆಗೆ ಕಂದಾಯ ಸಚಿವರು, ಅರಣ್ಯ ಇಲಾಖೆ ಸಚಿವರು, ವಸತಿ ಸಚಿವರು ಹಾಗೂ ಈ ಎಲ್ಲ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಇರಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...