ಬೆಂಗಳೂರು | ‘ಇನ್ನು ಮುಂದೆ ತಪ್ಪು ಮಾಡುವುದಿಲ್ಲ’ ಎಂದು ಹೇಳಿ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

Date:

‘ಇನ್ನು ಮುಂದೆ ನಾನು ತಪ್ಪು ಮಾಡುವುದಿಲ್ಲ ಎಂದು ತಂದೆಗೆ ಕರೆ ಮಾಡಿ ತಿಳಿಸಿ, ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ.

ವಿಶು ಉತ್ತಪ್ಪ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರಿನ ಕಾಲೇಜಿನೊಂದರಲ್ಲಿ ಬಿಇ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದನು. ಈತನ ತಂದೆ ತಮ್ಮಯ್ಯ, ಮೂಲತಃ ಕೊಡಗಿನವರು.

ತಮ್ಮಯ್ಯ ಅವರು ಬೆಂಗಳೂರಿನ ನೈಸ್‌ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 15 ವರ್ಷದಿಂದ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಭವಾನಿನಗರದಲ್ಲಿ ಕುಟುಂಬ ಸಮೇತ ವಾಸವಿದ್ದರು. ತಂದೆ ರೇಷನ್‌ ತರಲು ಹೋದಾಗ ವಿಶು ತಂದೆಯ ಗನ್​ನಿಂದ ಎದೆಗೆ ಫೈರ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ತಾನು ಗುಂಡು ಹಾರಿಸಿಕೊಂಡ ವಿಷಯವನ್ನು ತಾನೇ ತನ್ನ ತಂದೆಗೆ ಕರೆ ಮಾಡಿ ವಿಶು ಉತ್ತಪ್ಪ ತಿಳಿಸಿದ್ದು, ‘ಇನ್ನುಮುಂದೆ ತಾನು ತಪ್ಪು ಮಾಡುವುದಿಲ್ಲ’ ಎಂಬ ಮಾತನ್ನೂ ಸಹ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ಟಾರ್‌ ಹೋಟೆಲ್ ಹೆಸರು ಹೇಳಿ ಹಣ ಲಪಟಾಯಿಸಿದ ಕಿಡಿಗೇಡಿಗಳು

ಗಾಬರಿಗೊಂಡ ತಂದೆ ಮನೆಗೆ ಬಂದು ನೋಡಿದಾಗ ಮಗ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...