ಬೆಂಗಳೂರು | ವಿದ್ಯಾರ್ಥಿಗಳು ಕನ್ನಡದ ಕಥೆ-ಕಾದಂಬರಿ ಓದಬೇಕು: ಶಾಸಕ ಎಂ. ಕೃಷ್ಣಪ್ಪ

Date:

ʼಪ್ರಸ್ತುತ ಕಾಲದ ವಿದ್ಯಾರ್ಥಿಗಳು ಕನ್ನಡದ ಕಥೆ-ಕಾದಂಬರಿಗಳನ್ನು ಓದುವುದನ್ನು ಮೈಗೂಡಿಸಿಕೊಂಡರೆ ಸಾಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬಹುದುʼ ಎಂದು ಮಾಜಿ ಸಚಿವ ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಕರ್ನಾಟಕ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಮಾಹಿತಿ ಯುಗದಲ್ಲಿ ಯುವಕರು ಓದುವುದು ಕಡಿಮೆಯಾಗಿದ್ದು, ಮೊಬೈಲ್‌ನಲ್ಲಿ ಮುಳುಗಿ ಹೋಗಿದ್ದಾರೆ. ಅದರಿಂದ ಹೊರಬಂದು ಭಾಷೆಯ ಬೆಳವಣಿಗೆಗೆ ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿ ದೇಶದ ಎಲ್ಲ ಜನರು ನೆಲೆಸಿದ್ದಾರೆ. ಅವರು ತಮ್ಮ ಮನೆಗಳಲ್ಲಿ ಮಾತೃಭಾಷೆಗಳಲ್ಲಿ ಮಾತನಾಡಲಿ, ಆದರೆ ಹೊರಗೆ ಬಂದಾಗ ಕನ್ನಡ ಭಾಷೆಯನ್ನು ಮಾತನಾಡಿ ಕನ್ನಡಕ್ಕೆ ಗೌರವ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸರ್ಕಾರ ಉನ್ನತ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ. ಆದ್ದರಿಂದ ಇಂದು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಿದೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು” ಎಂದು ಹೇಳಿದರು.

“ಬಹುತೇಕ ಮಹಾನ್ ನಾಯಕರ ಹೋರಾಟದ ಫಲವಾಗಿ ವಿಶಾಲ ಕರ್ನಾಟಕದ ಉಗಮವಾಗಿದೆ. ಇದರ ಆಚರಣೆಯೇ ಕರ್ನಾಟಕ ರಾಜ್ಯೋತ್ಸವ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಂದ್ರಯಾನ ಯಶಸ್ವಿಯಾದರೂ ಮಹಿಳೆಯರ ಮೇಲಿನ ಕೀಳಿರಿಮೆ ಕಡಿಮೆಯಾಗಿಲ್ಲ: ಎನ್‌ಎಫ್‌ಐಡಬ್ಲ್ಯೂ ರಾಜ್ಯಾಧ್ಯಕ್ಷೆ 

ʼನಿರಂತರ ಯೂಟ್ಯೂಬ್ ಟಿವಿʼ ಉದ್ಘಾಟನೆ: ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ವಿದ್ಯಾರ್ಥಿಗಳು ಆರಂಭಿಸಿರುವ ʼವಿಜಯ ನಿರಂತರʼ ಯೂಟ್ಯೂಬ್ ಟಿವಿಯನ್ನು ಶಾಸಕರು ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವೈ ವೆಂಕಟೇಶಪ್ಪ, ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗುಂಡೀಗೆರೆ ವಿಶ್ವನಾಥ್, ಸುಪ್ರಸಿದ್ಧ ಗಾಯಕ ಕಡಬಗೆರೆ ಮುನಿರಾಜು, ಕನ್ನಡ ಸಂಘದ ಸಂಚಾಲಕ ಕೆ ಭೈರಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...