ಬೆಂಗಳೂರು | ಜ.17ರಂದು ಟಿ-20 ಕ್ರಿಕೆಟ್ : ಹೆಚ್ಚುವರಿ ಬಸ್ ಸೇವೆ ಒದಗಿಸಿದ ಬಿಎಂಟಿಸಿ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17ರಂದು ಇಂಡಿಯಾ ಹಾಗೂಫ್ಘಾನಿಸ್ತಾನ ನಡುವೆ ಟಿ-20 ಹೊನಲು ಬೆಳಕಿನ ಪಂದ್ಯ ನಡೆಯಲಿದೆ. ಪಂದ್ಯ ವೀಕ್ಷಣೆಗೆ ಸಾವಿರಾರು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ, ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೆಚ್ಚುವರಿ ಬಸ್ಸೇವೆಯನ್ನು ಒದಗಿಸಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ಕೆಂಗೇರಿ ಕೆಎಚ್ಬಿ ವಸತಿ ಗೃಹಗಳು, ಜನಪ್ರಿಯ ಟೌನ್ಶಿಪ್ ನೆಲಮಂಗಲ, ಯಲಹಂಕ 5ನೇ ಹಂತ, ಆರ್ಕೆ ಹೆಗಡೆನಗರಯಲಹಂಕ, ಬಾಗಲೂರು, ಹೊಸಕೋಟೆ ಸೇರಿದಂತೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ 12 ಕಡೆಗಳಿಗೆ ಹೆಚ್ಚುವರಿ ಬಸ್​​​ ಕಾರ್ಯಾಚರಣೆ ನಡೆಸಲಿವೆ.

ಮಾರ್ಗಸಂಖ್ಯೆ ಎಸ್ಬಿಎಸ್ -1ಕೆ ಬಸ್ ಎಚ್ಎಎಲ್ ಮಾರ್ಗವಾಗಿ ಕಾಡುಕೋಡಿ ತಲುಪಲಿದೆ. ಎಸ್ಬಿಎಸ್-13ಕೆ ನಂಬರಿನ ಬಸ್ ಹೂಡಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣ ತಲುಪಲಿದೆ. ಜಿ-2 ಬಸ್ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಜಿ-3ಬಸ್ ಹೊಸೂರು ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ, ಜಿ-4 ಜಯದೇವ ಆಸ್ಪತ್ರೆ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೇಸ್‌ಕೋರ್ಸ್‌ ಮೇಲೆ ಸಿಸಿಬಿ ದಾಳಿ; ₹3 ಕೋಟಿ 47 ಲಕ್ಷ ಹಣ ಜಪ್ತಿ

ಜಿ-6 ಬಸ್ ಮೈಸೂರು ರಸ್ತೆ, ನಾಯಂಡಹಳ್ಳಿ ಮಾರ್ಗವಾಗಿ ಕೆಂಗೇರಿ ಕೆಎಚ್ಬಿ ಕ್ವಾಟ್ರರ್‍ಸ್ ತಲುಪಿದರೆ ಜಿ-7 ಬಸ್ ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್ಶಿಪ್ ಹಾಗೂ ಜಿ-8 ಬಸ್ ಯಶವಂತಪುರ ಮಾರ್ಗವಾಗಿ ನೆಲಮಂಗಲ ಸಂಚರಿಸಲಿದೆ. ಜಿ-9 ಬಸ್ ಹೆಬ್ಬಾಳ ಮಾರ್ಗವಾಗಿ ಯಲಹಂಕ 5ನೇ ಹಂತ, ಜಿ-10 ಬಸ್ ನಾಗವಾರ, ಟ್ಯಾನರಿ ರಸ್ತೆ ಮೂಲಕ ಹೆಗಡೆನಗರ, ಯಲಹಂಕ ತಲುಪಲಿದೆ.

ಜಿ-11 ಬಸ್ ಹೆಣ್ಣೂರು ರಸ್ತೆ ಮೂಲಕ ಬಾಗಲೂರುವರೆಗೆ ಸಂಚರಿಸಲಿದ್ದು, ಕೆಎಚ್ಬಿ-12 ಎಚ್ಕೆ ಬಸ್ ಟಿನ್ ಫ್ಯಾಕ್ಟ್ರಿ ಮೂಲಕ ಹೊಸಕೋಟೆವರೆಗೂ ಸಂಚರಿಸಲಿದೆ ಎಂದು ಬಿಎಂಟಿಸಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...