ಬೆಂಗಳೂರು | ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಚಾಲಕ

Date:

ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಕ್ಯಾಬ್‌ ಚಾಲಕನೊಬ್ಬ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬೋಗನಹಳ್ಳಿಯಲ್ಲಿ ನಡೆದಿದೆ.

ಕ್ಯಾಬ್‌ ಚಾಲಕ ಬಸವರಾಜ್ ಹಲ್ಲೆ ಮಾಡಿದ ವ್ಯಕ್ತಿ. ಬೆಂಗಳೂರಿನ ಬೋಗನಹಳ್ಳಿಯ ಮಹಿಳೆಯೊಬ್ಬರು ತಮ್ಮ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಬುಧವಾರ ಬೆಳಗ್ಗೆ ಉಬರ್ ಕ್ಯಾಬ್‌ ಬುಕ್ ಮಾಡಿದ್ದರು.

ಮಹಿಳೆ ಬುಕ್ ಮಾಡಿದ್ದ ಸ್ಥಳಕ್ಕೆ ಮತ್ತೊಂದು ಕ್ಯಾಬ್ ಬಂದು ನಿಂತಿತ್ತು. ಆಸ್ಪತ್ರೆಗೆ ಹೋಗುವ ಅವಸರದಲ್ಲಿದ್ದ ಮಹಿಳೆ ತಾನು ಬುಕ್ ಮಾಡಿದ ಕ್ಯಾಬ್ ಇದೇ ಎಂದು ಮಗನೊಂದಿಗೆ ಕ್ಯಾಬ್​ನಲ್ಲಿ ಕುಳಿತಿದ್ದಾಳೆ. ಬಳಿಕ ಇದು ಬೇರೆ ಕ್ಯಾಬ್, ತಾನು ಬುಕ್ ಮಾಡಿದ ಕ್ಯಾಬ್ ಇನ್ನು ಬಂದಿಲ್ಲ ಎಂದು ಗಮನಕ್ಕೆ ಬಂದಿದೆ. ಕೂಡಲೇ ಮಹಿಳೆ ಕಾರ್​ನಿಂದ ಇಳಿಯಲು ಮುಂದಾಗಿದ್ದಾರೆ. ಈ ವೇಳೆ ಚಾಲಕ ಕಾರು ಚಲಾಯಿಸಿದ್ದಾನೆ. ಕಾರಿನಿಂದ ಇಳಿಯಲು ಪ್ರಯತ್ನ ಮಾಡಿದರೂ ಕೂಡ ಕ್ಯಾಬ್‌ ನಿಲ್ಲಿಸಿ, ಆ ಬಳಿಕ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ತಾಯಿಯ ರಕ್ಷಣೆಗೆ ಮಗ ಮುಂದಾಗಿದ್ದಾನೆ. ಆಗ ಬಾಲಕನ ಮೇಲೆಯೂ ಚಾಲಕ ಹಲ್ಲೆ ಮಾಡಿದ್ದಾನೆ. ಸ್ಥಳೀಯರು ಬಂದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಮೂರು ದಿನ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ಈ ಘಟನೆಯ ದೃಶ್ಯ ಅಪಾರ್ಟ್‌ಮೆಂಟ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಬಗ್ಗೆ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯ ಪತಿ ಅಜಯ್ ಅಗರ್ವಾಲ್ ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

“ಅಪಾರ್ಟ್‌ಮೆಂಟ್‌ನಲ್ಲಿ ಎರಡು ಕ್ಯಾಬ್‌ಗಳು ಬುಕ್‌ ಆಗಿದ್ದವು. ಈ ವೇಳೆ, ಬಸವರಾಜ್ ಅಪಾರ್ಟ್‌ಮೆಂಟ್‌ ಬಳಿ ಬಂದಿದ್ದಾರೆ. ಮಗನನ್ನು ಆಸ್ಪತ್ರೆಗೆ ತೋರಿಸುವ ಧಾವಂತದಲ್ಲಿ ಇದ್ದ ಮಹಿಳೆಯು ಅಪಾರ್ಟ್‌ಮೆಂಟ್‌ ಮುಂದೆ ಬಂದ ಕ್ಯಾಬ್‌ ಅನ್ನು ಹತ್ತಿದ್ದಾಳೆ. ಕ್ಯಾಬ್ ಸ್ವಲ್ಪ ದೂರ ಕ್ರಮಿಸಿದ ನಂತರ ಕ್ಯಾಬ್ ಚಾಲಕನಿಗೆ ಕಾರ್ ನಿಲ್ಲಿಸುವಂತೆ ಏಕವಚನದಲ್ಲಿ ನಿಂದಿಸಿದ್ದಾಳೆ. ಕೆಲ ಸಮಯ ಕಾರಿನಲ್ಲಿ ಮಾತಿಗೆ ಮಾತು ಬೆಳೆದಿದೆ. ಬಳಿಕ ಕಾರ್ ಇಳಿಯುವಾಗ ಮಹಿಳೆ ಜೋರಾಗಿ ಕಾರ್ ಡೋರ್ ಹಾಕಿದ್ದಾರೆ. ಇದರಿಂದ ಕೋಪಗೊಂಡ ಚಾಲಕ ಮಹಿಳೆಯನ್ನು ನೂಕಿದ್ದಾನೆ” ಎಂದು ತಿಳಿದುಬಂದಿದೆ.

ಸದ್ಯ ಬೆಳ್ಳಂದೂರು ಪೊಲೀಸರು ಕ್ಯಾಬ್ ಚಾಲಕ ಬಸವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...