ಬೆಂಗಳೂರು | ಮಗಳನ್ನು ಚುಡಾಯಿಸುತ್ತಿದ್ದ ಯುವಕನ ಕೊಂದ ತಂದೆ

Date:

ಅಪ್ರಾಪ್ತ ಮಗಳನ್ನು ಚುಡಾಯಿಸಿದ್ದಕ್ಕೆ ಕೋಪಗೊಂಡ ತಂದೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡೇವಿಡ್ (22) ಕೊಲೆಯಾದ ದರ್ದೈವಿ. ಮಂಜುನಾಥ್ ಬಂಧಿತ ಆರೋಪಿ. ಈತನು ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ವಿನಾಯಕನಗರದ ನಿವಾಸಿ. ಯುವಕನನ್ನ ಚಾಕುವಿನಿಂದ ತಿವಿದು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಆರೋಪದಡಿ ಈತನನ್ನುಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಆಟೋ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಕೊಲೆಯಾದ ಡೇವಿಡ್‌, ಮಂಜುನಾಥರ ಅಪ್ರಾಪ್ತ ಮಗಳನ್ನು ಪ್ರೀತಿ ಮಾಡುತ್ತಿದ್ದನು. ಯುವತಿಯೂ ಸಹ ಡೇವಿಡ್‌ನನ್ನು ಪ್ರೀತಿ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೀತಿ ಮಾಡುತ್ತಿದ್ದ ಈ ಇಬ್ಬರ ಮದುವೆಗೆ ಆರೋಪಿ ಮಂಜುನಾಥ್ ಒಪ್ಪಿಗೆ ನೀಡಿರಲಿಲ್ಲ. ಆದರೆ, ಡೇವಿಡ್ ಪದೇ ಪದೇ ಮಂಜುನಾಥ್‌ನಿಗೆ ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದನು. ಮದುವೆ ಮಾಡಿ ಕೊಡದಿದ್ದರೆ, ಮಗಳ ಜೊತೆಗಿರುವ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದನು ಎಂದು ತಿಳಿದುಬಂದಿದೆ.

ಮಾನ ಮರ್ಯಾದೆಗೆ ಹೆದರಿದ ಮಂಜುನಾಥ್ ಡೇವಿಡ್ ಜತೆಗೆ ಮಾತನಾಡಲು ನ.21 ರಂದು ಸಾಯಂಕಾಲ 6.30 ಸುಮಾರಿಗೆ ಅಶೋಕ ನಗರದ ಸುಬ್ಬಣ್ಣ ಗಾರ್ಡನ್ ಬಳಿ ಆತನನ್ನು ಕರೆಯಿಸಿಕೊಂಡಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿ – ಮಾದವಾರ ಬಿಎಂಟಿಸಿ ಬಸ್‌ ಸೇವೆ ಆರಂಭ

ಈ ವೇಳೆ, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಕೋಪದಲ್ಲಿದ್ದ ಮಂಜುನಾಥ್ ಡೇವಿಡ್‌ಗೆ ಚಾಕುವಿನಿಂದ ಚುಚ್ಚಿದ್ದಾನೆ. ಜತೆಗೆ, ಕಲ್ಲಿನಿಂದ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಅಶೋಕನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...